ಕೊಣಾಜೆ: ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ
ಕೊಣಾಜೆ, ಎ.1: ಇಲ್ಲಿನ ಶ್ರೀ.ಡಿ. ದೇವರಾಜ ಅರಸು ವಿದ್ಯಾರ್ಥಿ ನಿಲಯದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸ್ನಾತಕೋತ್ತರ ಪುರುಷರ ವಿದ್ಯಾರ್ಥಿ ನಿಲಯ ಕೊಣಾಜೆ ಮತ್ತು ಮೆಟ್ರಿಕ್ ನಂತರ ಮಹಿಳಾ ವಿದ್ಯಾರ್ಥಿ ನಿಲಯದ ವತಿಯಿಂದ ಇಂದು ವಿದ್ಯಾರ್ಥಿ ನಿಲಯದ ವಾರ್ಷಿಕೋತ್ಸವ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆ ಮಂಗಳೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವಿಸ್ತರಣಾಧಿಕಾರಿ ಸುಂದರ ನಾಯ್ಕ್ ವಹಿಸಿದ್ದರು. ವೇದಿಕೆಯಲ್ಲಿ ಮಂಗಳೂರು ವಿವಿಯ ಕುಲಸಚಿವ ಕೆ.ಎಂ ಲೋಕೆಶ್, ಗ್ರಾಪಂ ಸದಸ್ಯರಾದ ನಝರ್, ನಿಲಯ ಪಾಲಕ ಶ್ರೀಕಾಂತ್ ಗುಣಗ, ಸಂದೀಪ್ ಉಪಸ್ಥಿತರಿದ್ದರು.
ಇದೇ ವೇಳೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ವಿದ್ಯಾರ್ಥಿ ನಿಲಯದ ಹಳೆ ವಿದ್ಯಾರ್ಥಿಗಳಾದ ಮುಸ್ತಫಾ ಕೆ.ಎಚ್ , ಸಂದೀಪ್, ನಾಗರಾಜ್, ಪ್ರವೀನ್ ಕುಮಾರ್, ರವಿ ವಾಲ್ಕೆ ಇವರನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ವಿದ್ಯಾರ್ಥಿ ನಿಲಯದ ಅಧ್ಯಕ್ಷರಾದ ವಿನ್ಯಾಸ್, ಕಾರ್ಯದರ್ಶಿ ಕೌಶಿಕ್, ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮವನ್ನು ನಿಲಯ ಪಾಲಕರಾದ ಶ್ರೀಕಾಂತ್ ಗುಣಗ ಸ್ವಾಗತಿಸಿ, ಲೋಕೇಶ್ ವಂದಿಸಿದರು. ಕಾರ್ಯಕ್ರಮವನ್ನು ಮಹಂತೇಶ್ ಹಿರೇಮಠ್, ಅಶೋಕ್ ನಿರೂಪಿಸಿದರು.