×
Ad

ಸಾಲಿಗ್ರಾಮ: ಆಕ್ಷೇಪಕ್ಕೆ ಆಹ್ವಾನ

Update: 2017-04-02 00:09 IST

ಉಡುಪಿ, ಎ.1: ಸಾಲಿಗ್ರಾಮ ಪಟ್ಟಣ ಪಂಚಾಯತ್‌ನ ಜನಸಂಖ್ಯೆಯ ಆಧಾರದಲ್ಲಿ ಕ್ಷೇತ್ರ ಪುನರ್ ವಿಂಗಡಣೆ ಮಾಡಲಾಗಿದ್ದು, ಒಟ್ಟು 16 ವಾರ್ಡುಗಳನ್ನು ರಚಿಸಲಾಗಿದೆ. ಈ ಬಗ್ಗೆ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಅಂತಿಮ ಪ್ರಕಟನೆ ನೀಡಬೇಕಾಗಿದೆ. ಸಾರ್ವಜನಿಕರು ಕ್ಷೇತ್ರ ಪುನರ್‌ವಿಂಗಡಣೆಯ ಬಗ್ಗೆ ಯಾವುದೇ ಆಕ್ಷೇಪಣೆಗಳಿದ್ದಲ್ಲಿ ಅಥವಾ ಸಲಹೆ ಸೂಚನೆಗಳು ಇದ್ದಲ್ಲಿ ಎ.6ರೊಳಗೆ ಲಿಖಿತ ರೂಪದಲ್ಲಿ ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಅಥವಾ ಪಟ್ಟಣ ಪಂಚಾಯತ್ ಸಾಲಿಗ್ರಾಮ ಮತ್ತು ಉಡುಪಿ ತಾಲೂಕು ಕಚೇರಿಗೆ ಸಲ್ಲಿಸಲು ಸೂಚಿಸಲಾಗಿದೆ.

ಹೆಚ್ಚಿನ ವಿವರಗಳನ್ನು ಸಾಲಿಗ್ರಾಮ ಪಪಂ ಕಚೇರಿಯಲ್ಲಿ ಪಡೆಯಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News