×
Ad

ಎ.4ರಿಂದ ರೋಶನಿ ನಿಲಯದಲ್ಲಿ ರಾಷ್ಟ್ರಮಟ್ಟದ ವಿಚಾರ ಸಂಕಿರಣ

Update: 2017-04-02 00:10 IST

 ಮೂಡುಬಿದಿರೆ, ಎ.1: ನಗರದ ರೋಶನಿ ನಿಲಯ ಕಾಲೇಜಿನ ಮಾನವ ಸಂಪನ್ಮೂಲ ವಿಭಾಗದ ವತಿಯಿಂದ ಎ.4 ಮತ್ತು 5ರಂದು HR DISRUPTION- EXPLORE EVOLVE ENERGIZEಎಂಬ ವಿಷಯದ ಕುರಿತು ರಾಷ್ಟ್ರಮಟ್ಟದ ವಿಚಾರ ಸಂಕಿರಣವನ್ನು ಕಾಲೇಜಿನ ಸಭಾಂಗಣದಲ್ಲಿ ಆಯೋಜಿಸಿದೆ.

ಎ.4ರಂದು ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಂಗಳೂರು ಪೊಲೀಸ್ ಕಮಿಷನರ್ ಚಂದ್ರಶೇಖರ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ಕಾಲೇಜಿನ ಪ್ರಾಂಶುಪಾಲೆ ಸೋಫಿಯ ಫೆರ್ನಾಂಡಿಸ್ ಅಧ್ಯಕ್ಷತೆ ವಹಿಸುವರು. ಮುಂಬೈನ ವಿವಿಎಫ್ ಇಂಡಿಯಾ ಲಿಮಿಟೆಡ್‌ನ ಮಾನವ ಸಂಪನ್ಮೂಲ ಇಲಾಖೆಯ ಹಿರಿಯ ವ್ಯವಸ್ಥಾಪಕ ಚಾರ್ಲ್ಸ್ ಕಾರ್ವಾಲೊ ದಿಕ್ಸೂಚಿ ಭಾಷಣ ಮಾಡುವರು.

ಕಾಲೇಜಿನ ಉಪಪ್ರಾಂಶುಪಾಲೆ ಜೇನಿಸ್ ಮೇರಿ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News