ರೈತರಿಂದ ಬಲವಂತದ ಸಾಲ ವಸೂಲಿ ಬೇಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಬೆಂಗಳೂರು, ಎ.2: ರಾಜ್ಯದಲ್ಲಿ ಬರದ ಸ್ಥಿತಿ ತೀವ್ರವಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಬ್ಯಾಂಕ್‌ಗಳು ರೈತರಿಂದ ಒತ್ತಾಯಪೂರ್ವಕವಾಗಿ ಸಾಲ ವಸೂಲಿ ಮಾಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಾಕೀತು ಮಾಡಿದ್ದಾರೆ.
ರವಿವಾರ ಕೋರಮಂಗಲದ ಕೆಎಸ್ಸಾರ್ಪಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಧ್ವಜ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರಿಂದ ಬಲವಂತವಾಗಿ ಸಾಲ ವಸೂಲು ಮಾಡಬಾರದು ಎಂದು ಬ್ಯಾಂಕ್‌ಗಳಿಗೆ ಸಹಕಾರ ಸಂಘಗಳಿಗೆ ಸೂಚನೆ ನೀಡಲಾಗಿದೆ ಎಂದರು.
ಬ್ಯಾಂಕ್‌ಗಳು ಹುಬ್ಬಳ್ಳಿಯ ರೈತರಿಗೆ ನೋಟಿಸ್ ನೀಡಿ 15 ದಿನಗಳಲ್ಲಿ ಸಾಲ ತೀರಿಸಬೇಕೆಂದು ಕಟ್ಟಾಜ್ಞೆ ನೀಡಿರುವ ಕುರಿತು ಮಾಹಿತಿ ಬಂದಿದೆ. ನೋಟಿಸ್ ಕೊಟ್ಟಿರುವ ಬ್ಯಾಂಕ್‌ಗಳಿಗೆ ಯಾರಿಂದಲೂ ಬಲವಂತದ ಸಾಲ ವಸೂಲಿ ಮಾಡಬಾರದೆಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗುವುದು ಎಂದು ತಿಳಿಸಿದರು.
ಕಾವೇರಿ ಜಲಾಶಯಗಳಲ್ಲಿ ಕನಿಷ್ಟ ನೀರಿಲ್ಲದ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಬಿಡಲು ಹೇಗೆ ಸಾಧ್ಯ. ಒಂದು ವೇಳೆ ಮಳೆಯಾದರೆ ನೀರು ಬಿಡಲಾಗುವುದು. ಈ ಬಗ್ಗೆ ತಮಿಳುನಾಡಿನ ಅಧಿಕಾರಿಗಳಿಗೆ ರಾಜ್ಯದ ವಾಸ್ತವ ಪರಿಸ್ಥಿತಿಯನ್ನು ಮನವರಿಕೆ ಮಾಡಿಕೊಟ್ಟಿದ್ದೇವೆ.
-ಸಿದ್ದರಾಮಯ್ಯ ಮುಖ್ಯಮಂತ್ರಿ
ಲಾರಿ ಮಾಲಕರ ಜತೆ ಚರ್ಚೆ:
ಲಾರಿ ಮಾಲಿಕರು ಮುಂದಿಟ್ಟಿರುವ ಬಹುತೇಕ ಬೇಡಿಕೆಗಳು ಕೇಂದ್ರ ಸರಕಾರಕ್ಕೆ ಸಂಬಂಧಿಸಿದಾಗಿದೆ. ಆದರೂ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿಗೆ ಲಾರಿ ಮಾಲಕರೊಂದಿಗೆ ಮಾತನಾಡಿ, ಸಂಧಾನದ ಮೂಲಕ ಸಮಸ್ಯೆಗಳನ್ನು ಬಗೆ ಹರಿಸಲು ಸೂಚಿಸಿದ್ದೇನೆ.
-ಸಿದ್ದರಾಮಯ್ಯ ಮುಖ್ಯಮಂತ್ರಿ