ಕೆರೊಲಿನಾಳನ್ನು ಸೋಲಿಸಿದ ಸಿಂಧುಗೆ ಇಂಡಿಯಾ ಓಪನ್ ಸೂಪರ್ ಸೀರೀಸ್ ಕಿರೀಟ
Update: 2017-04-02 19:54 IST
ಹೊಸದಿಲ್ಲಿ,ಎ.2: ಸ್ಪೇನ್‌ನ ಅಗ್ರ ಶ್ರೇಯಾಂಕಿತ ಆಟಗಾರ್ತಿ ಕರೋಲಿನ್ ಮರಿನ್‌ರನ್ನು ನೇರಗೇಮ್‌ಗಳ ಅಂತರದಿಂದ ಸದೆಬಡಿದ ಭಾರತದ ಸ್ಟಾರ್ ಆಟಗಾರ್ತಿ ಪಿ.ವಿ.ಸಿಂಧು ಇಂಡಿಯ ಓಪನ್ ಸೂಪರ್ ಸರಣಿಯಲ್ಲಿ ಚೊಚ್ಚಲ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು.
ರವಿವಾರ ಇಲ್ಲಿನ ಸಿರಿ ಫೋರ್ಟ್ ಸ್ಪೋರ್ಟ್ಸ್ ಕಾಂಪ್ಲೆಕ್ಸ್‌ನಲ್ಲಿ ನಡೆದ ಮಹಿಳೆಯರ ಸಿಂಗಲ್ಸ್ ಫೈನಲ್ ಪಂದ್ಯದಲ್ಲಿ ಸಿಂಧು ಅವರು ಮರಿನ್‌ರನ್ನು 21-19 ಹಾಗೂ 21-16 ಗೇಮ್‌ಗಳ ಅಂತರದಿಂದ ಮಣಿಸಿ ಪ್ರಶಸ್ತಿ ಎತ್ತಿ ಹಿಡಿದರು. ಈ ಗೆಲುವಿನ ಮೂಲಕ ಸಿಂಧು ಅವರು ರಿಯೋ ಒಲಿಂಪಿಕ್ಸ್ ಫೈನಲ್ ಸೋಲಿಗೆ ತಕ್ಕ ಸೇಡು ತೀರಿಸಿಕೊಂಡರು.
ಸಿಂಧು ಒಲಿಂಪಿಕ್ಸ್‌ನಲ್ಲಿ ಮರಿನ್ ವಿರುದ್ಧ ಸೋತು ಬೆಳ್ಳಿ ಪದಕವನ್ನು ಗೆದ್ದುಕೊಂಡಿದ್ದರು.