ಮಂಗಳೂರು : ಕೊಲೆ ಪ್ರಕರಣದ ಆರೋಪಿ , ವಿಚಾರಣಾಧೀನ ಕೈದಿ ಆಸ್ಪತ್ರೆಯಲ್ಲಿ ಮೃತ್ಯು
Update: 2017-04-02 21:39 IST
ಮಂಗಳೂರು, ಎ.2: ಜಿಲ್ಲಾ ಕಾರಾಗೃಹದ ವಿಚಾರಣಾಧೀನ ಕೈದಿ ಬೆಳುವಾಯಿಯ ಸದಾನಂದ (40) ಎಂಬಾತ ರವಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿ 2015ರಲ್ಲಿ ಮೂಡುಬಿದಿರೆ ಪೊಲೀಸರು ಈತನನ್ನು ಬಂಧಿಸಿದ್ದರು. ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಈತನನ್ನು ಶನಿವಾರ ತಡರಾತ್ರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ. ಈ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜೈಲ್‌ನಲ್ಲಿ ನಿರ್ಲಕ್ಷ?:
ಜಿಲ್ಲಾ ಕಾರಾಗೃಹದಲ್ಲಿ ಕೆಲವು ದಿನಗಳಿಂದ ಹೃದಯ ಸಂಬಂಧಿ ಕಾಯಿಲೆಯಿಂದ ಸದಾನಂದ ಬಳಲುತ್ತಿದ್ದ ಎನ್ನಲಾಗಿದೆ. ಆದರೆ ಜೈಲು ಸಿಬ್ಬಂದಿ ವರ್ಗವು ಈತನನ್ನು ಆಸ್ಪತ್ರೆಗೆ ದಾಖಲಿಸದೆ ನಿರ್ಲಕ್ಷ ತಾಳಿದ್ದರು ಎಂದು ಹೇಳಲಾಗುತ್ತಿದೆ. ಸದಾನಂದನ ರೋಗ ಉಲ್ಬಣಿಸಿದ ಬಳಿಕ ಆಸ್ಪತ್ರೆಗೆ ಕೊಂಡೊಯ್ದು ದಾಖಲಿಸಿದ್ದರೂ ಪ್ರಯೋಜನವಾಗಲಿಲ್ಲ ಎಂಬ ಆರೋಪ ಕೇಳಿ ಬಂದಿದೆ.