ಮಂಗಳೂರು: ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ
Update: 2017-04-02 21:42 IST
ಮಂಗಳೂರು, ಎ.2: ನಗರ ಹೊರವಲಯದ ಇಂಜಿನಿಯರಿಂಗ್ ಕಾಲೇಜೊಂದರ ವಿದ್ಯಾರ್ಥಿನಿಯೊಬ್ಬಳು ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ರವಿವಾರ ನಡೆದಿದೆ.
ನಗರದ ಆಕಾಶಭವನ ನಿವಾಸಿ ಚಂದ್ರಶೇಖರ್ ಎಂಬವರ ಪುತ್ರಿ ಮನೀಶಾ (21) ಆತ್ಮಹತ್ಯೆ ಮಾಡಿಕೊಂಡಾಕೆ. ಮೂರನೆ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿರುವ ಈಕೆಗೆ ಕಣ್ಣು ಮತ್ತು ಕಿವಿ ರೋಗದ ಸಮಸ್ಯೆ ಇತ್ತು. ಅದಕ್ಕಾಗಿ ವೈದ್ಯರಿಂದ ಚಿಕಿತ್ಸೆಯೂ ನಡೆಯುತ್ತಿತ್ತು. ಇದರಿಂದ ಖಿನ್ನತೆಗೊಳಗಾಗಿದ್ದ ಈಕೆ ರವಿವಾರ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸುಮಾರು 10ರಿಂದ 12ರ ಮಧ್ಯೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಚಂದ್ರಶೇಖರ್‌ರಿಗೆ ಒಂದು ಹೆಣ್ಣು ಮತ್ತು ಒಂದು ಗಂಡು ಸಹಿತ ಇಬ್ಬರು ಮಕ್ಕಳು. ಮನೀಶಾಳ ಸಹೋದರ ಕೂಡ ವಿದ್ಯಾಭ್ಯಾಸ ಪಡೆಯುತ್ತಿದ್ದಾನೆ. ಈ ಬಗ್ಗೆ ಚಂದ್ರಶೇಖರ್ ನೀಡಿದ ದೂರಿನಂತೆ ಕಾವೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.