×
Ad

​ಉಡುಪಿ: ಪಲ್ಸ್ ಪೊಲಿಯೋ ಕಾರ್ಯಕ್ರಮಕ್ಕೆ ಚಾಲನೆ

Update: 2017-04-02 21:44 IST

ಉಡುಪಿ, ಎ.2: ಉಡುಪಿಯ ತಾಯಿ ಮತ್ತು ಮಕ್ಕಳ ಸರಕಾರಿ ಆಸ್ಪತ್ರೆಯಲ್ಲಿ ರವಿವಾರ ನಡೆದ ಜಿಲ್ಲಾ ಮಟ್ಟದ ಪಲ್ಸ್ ಪೋಲಿಯೊ ಕಾರ್ಯಕ್ರಮವನ್ನು ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ಉದ್ಘಾಟಿಸಿದರು.

ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಮಾತನಾಡಿ, ದೇಶ ದಲ್ಲಿ 2011ರ ನಂತರ ಪೋಲಿಯೊ ಪ್ರಕರಣಗಳು ಕಂಡು ಬಂದಿಲ್ಲ. ಆದರೂ ಸಹ ನಮ್ಮ ನೆರೆಯ ದೇಶಗಳಲ್ಲಿ ಪೊಲಿಯೋ ಪ್ರಕರಣಗಳು ಕಂಡು ಬಂದಿರು ವುದರಿಂದ, ಮುಂಜಾಗ್ರತಾ ಕ್ರಮವಾಗಿ ಭಾರತದಲ್ಲಿ ಪೊಲಿಯೋ ನೀಡಲಾಗು ತ್ತಿದೆ. ಆದುದರಿಂದ ಪೋಷಕರು ತಮ್ಮ ಮಕ್ಕಳಿಗೆ ತಪ್ಪದೇ ಪೋಲಿಯೊ ಹಾಕಿಸಬೇಕು ಎಂದರು.

ಉಡುಪಿ ಜಿಪಂ ಉಪಾಧ್ಯಕ್ಷೆ ಶೀಲಾ ಶೆಟ್ಟಿ, ಜಿಲ್ಲಾ ಸರ್ಜನ್ ಡಾ.ಮಧು ಸೂಧನ್ ನಾಯ್ಕಿ, ಆರ್.ಸಿ.ಎಚ್. ಅಧಿಕಾರಿ ಡಾ.ರಾಮ, ರೋಟರಿಯ ಅಧ್ಯಕ್ಷ ಡಾ.ಸುರೇಶ್ ಶೆಣ್ಯೆ, ಕಾರ್ಯದರ್ಶಿ ರಾಮಚಂದ್ರ ಉಪಾಧ್ಯಾಯ, ರೋಟರಿಯ ಲಸಿಕಾ ಕಾರ್ಯಕ್ರಮದ ಉಸ್ತುವಾರಿ ಜಯಚಂದ್ರ, ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಾಧಿಕಾರಿ ಡಾ.ಕಿಶೋರಿ, ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಮೊದಲಾದವರು ಉಪಸ್ಥಿತರಿದ್ದರು.

 ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೋಹಿಣಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News