×
Ad

ಉಡುಪಿ ಜಿಲ್ಲಾಧಿಕಾರಿ ಕೊಲೆ ಯತ್ನ ಪ್ರಕರಣ: 7 ಜನರ ಬಂಧನ

Update: 2017-04-03 12:31 IST

ಉಡುಪಿ, ಎ,3: ಅಕ್ರಮಮರಳುಗಾರಿಕೆಯನ್ನು ತಡೆಯಲು ಮಧ್ಯರಾತ್ರಿ ಕಾರ್ಯಾಚರಣೆಗೆ ಸ್ಥಳಕ್ಕೆ ತೆರಳಿದ್ದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್, ಎಸಿ ಶಿಲ್ಪಾ ನಾಗ್ ಹಾಗೂ ಗ್ರಾಮ ಲೆಕ್ಕಿಗನ ಕೊಲೆ ಮಾಡಲು ಯತ್ನಿಸಿದ 7 ಆರೋಪಿಗಳನ್ನು ಬಂಧಿಸಲಾಗಿದೆ.

ಕಂಡ್ಲೂರಿನಲ್ಲಿ ಕೊಲೆ ಮಾಡಲು ಯತ್ನಿಸಿದ 7 ಆರೋಪಿಗಳನ್ನು ಬಂಧಿಸಲಾಗಿದೆ. ಅವರಲ್ಲಿ ಒಬ್ಬನಿಗೆ ಬೆರಳು ತುಂಡರಿಸಿದ್ದರಿಂದ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು, ಹಳ್ನಾಡಿಯಲ್ಲಿ ಅಕ್ರಮ ಮರಳುಗಾರಿಕೆ ಆರೋಪದಡಿ  6 ಆರೋಪಿಗಳನ್ನು ಬಂಧಿಸಲಾಗಿದೆ. ಒಟ್ಟು 13 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಉಡುಪಿ ಎಸ್ಪಿ ಕೆ.ಟಿ. ಬಾಲಕೃಷ್ಣ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News