ಬಿಜೆಪಿ ಪಕ್ಷದಲ್ಲಿ ದಲಿತ ಅಧ್ಯಕ್ಷರನ್ನು ಯಾರು ಮಾಡಿದ್ದಾರೆ...? ; ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
Update: 2017-04-03 12:50 IST
ಬೆಂಗಳೂರು, ಎ.3: ಕಾಂಗ್ರೆಸ್ ನಲ್ಲಿ ದಲಿತ ನಾಯಕರನ್ನ ಸಿಎಂ ಸಿದ್ದರಾಮಯ್ಯ ತುಳಿಯುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಮುಂದಿನ ಟಾರ್ಗೆಟ್ ಜಿ.ಪರಮೇಶ್ವರ್ ಹೇಳಿಕೆ ವಿಚಾರವಾಗಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಜೆಪಿ ಪಕ್ಷದ ಅಧ್ಯಕ್ಷರನ್ನಾಗಿ ದಲಿತರನ್ನು ಆಯ್ಕೆ ಮಾಡಿದ್ದಾರೆಯೇ? ಎಂದು ಪ್ರಶ್ನಿಸಿದದರು.
ಏಳು ವರ್ಷದಿಂದ ಪರಮೇಶ್ವರ್ ಕೆಪಿಸಿಸಿ ಅಧ್ಯಕ್ಷರಾಗಿದ್ದು, ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಹಿಂದೆ ಮಲ್ಲಿಕಾರ್ಜುನ ಖರ್ಗೆ ಕೂಡ ಅಧ್ಯಕ್ಷರಾಗಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿ ಮುಂದುವರೆಸುವ ಬಗ್ಗೆ ಹೈಕಮಾಂಡ್ ತೀರ್ಮಾನ ತೆಗದುಕೊಳ್ಳಲಿದೆ. ಎಂದರು.
ಮೊದಲು ಬಿಜೆಪಿಯವರು ದಲಿತ ನಾಯಕರನ್ನು ಅಧ್ಯಕ್ಷರನ್ನಾಗಿ ಮಾಡಿ ತೋರಿಸಲಿ. ಆರ್.ಅಶೋಕ್ ಹೇಳಿಕೆ ರಾಜಕೀಯ ಪ್ರೇರಿತವಾದದ್ದು, ಎರಡು ಕ್ಷೇತ್ರದ ಉಪಚುನಾವಣೆ ಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂದು ಹೇಳಿದ್ದಾರೆ.