×
Ad

ಪಾಕಿಸ್ತಾನದಿಂದ ಕದನ ವಿರಾಮ ಉಲ್ಲಂಘನೆ

Update: 2017-04-03 14:16 IST

ಜಮ್ಮು,ಎ.3: ಜಮ್ಮು ಕಾಶ್ಮೀರದ ಪೂಂಛ್ ಜಿಲ್ಲೆಯಲ್ಲಿ ನಿಯಂತ್ರಣ ರೇಖೆಯಲ್ಲಿನ ಮುಂಚೂಣಿ ಸೇನಾಠಾಣೆಗಳು ಮತ್ತು ನಾಗರಿಕ ಪ್ರದೇಶಗಳ ಮೇಲೆ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಗುಂಡುಗಳನ್ನು ಹಾರಿಸುವ ಮೂಲಕ ಪಾಕಿಸ್ತಾನವು ಸೋಮವಾರ ಮತ್ತೆ ಕದನ ವಿರಾಮ ಒಪ್ಪಂದವನ್ನು ಉಲ್ಲಂಘಿಸಿದೆ.

ಭಾರತೀಯ ಸೇನೆಯು ಪ್ರತಿದಾಳಿ ನಡೆಸಿದ್ದು, ಗುಂಡಿನ ಕಾಳಗ ಮುಂದುವರಿದಿದೆ ಎಂದು ರಕ್ಷಣಾ ವಕ್ತಾರರು ತಿಳಿಸಿದರು.

 ಬೆಳಿಗ್ಗೆ 9:30ರಿಂದ ಪಾಕ್ ಸೈನಿಕರು ಗುಂಡು ಮತ್ತು ಮಾರ್ಟರ್ ದಾಳಿಗಳನ್ನು ನಡೆಸುತ್ತಿದ್ದು, ದಿಗ್ವಾರ್ ಪ್ರದೇಶದಲ್ಲಿ ನಡೆಯುತ್ತಿರುವ ಭಾರೀ ಶೆಲ್ ದಾಳಿಯು ಗಡಿಭಾಗದ ನಿವಾಸಿಗಳಲ್ಲಿ ಆತಂಕ ಸೃಷ್ಟಿಸಿದೆ.

ಪಾಕಿಸ್ತಾನವು ಪೂಂಛ್‌ನ ನಿಯಂತ್ರಣ ರೇಖೆಯಲ್ಲಿ ಇದೊಂದೇ ತಿಂಗಳಲ್ಲಿ ನಾಲ್ಕನೇ ಬಾರಿಗೆ ಕದನ ವಿರಾಮವನ್ನು ಉಲ್ಲಂಘಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News