×
Ad

ದಿಲ್ಲಿ ಮಹಾನಗರಪಾಲಿಕೆ ಚುನಾವಣೆ: ಸ್ವರಾಜ್ ಇಂಡಿಯಾ ಪಕ್ಷಕ್ಕೆ ಸಾಮಾನ್ಯ ಚಿಹ್ನೆಗೆ ನಕಾರ

Update: 2017-04-03 22:17 IST

ಹೊಸದಿಲ್ಲಿ, ಎ.3: ದಿಲ್ಲಿ ಮಹಾನಗರಪಾಲಿಕೆ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಪಕ್ಷದ ಅಭ್ಯರ್ಥಿಗಳಿಗೆ ಸಾಮಾನ್ಯ ಚಿಹ್ನೆ ನೀಡಬೇಕೆಂಬ ಯೋಗೇಂದ್ರ ಯಾದವ್ ನೇತೃತ್ವದ ಸ್ವರಾಜ್ ಇಂಡಿಯಾ ಪಕ್ಷದ ಕೋರಿಕೆಯನ್ನು ದಿಲ್ಲಿ ಹೈಕೋರ್ಟ್ ತಳ್ಳಿ ಹಾಕಿದೆ.

  ಚುನಾವಣಾ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು ಈ ರೀತಿಯ ಆದೇಶ ನೀಡಿದರೆ ಸಮಸ್ಯೆಯಾಗಬಹುದು ಎಂದು ನ್ಯಾಯಮೂರ್ತಿ ಸಂಜಯ್ ಖನ್ನಾ ಮತ್ತು ಚಂದರ್‌ಶೇಖರ್ ಅವರನ್ನೊಳಗೊಂಡ ನ್ಯಾಯಪೀಠವೊಂದು ತಿಳಿಸಿತು. ಚುನಾವಣಾ ಪ್ರಕ್ರಿಯೆ ಆರಂಭಗೊಳ್ಳುವ ಮೊದಲು ಇಂತಹ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಬೇಕು ಎಂದು ನ್ಯಾಯಾಲಯ ತಿಳಿಸಿ ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 19ಕ್ಕೆ ನಿಗದಿಗೊಳಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News