ಹೆಲ್ಪ್‌ಇಂಡಿಯಾ: ಉಚಿತ ಟೈಲರಿಂಗ್ ತರಬೇತಿಗೆ ಚಾಲನೆ

Update: 2017-04-03 18:36 GMT

ಉಳ್ಳಾಲ, ಎ.3: ನಿರ್ಗತಿಕರನ್ನು ಗುರುತಿಸಿ ಅವರ ಸೇವೆ ಮಾಡುವ ಮೂಲಕ ಆರಂಭಗೊಂಡ ಸಾಮಾಜಿಕ ಕಳಕಳಿಯ ಸೇವೆಯು ಇಂದು ಸಂಘಟನೆಯ ಮೂಲಕ ವಿಸ್ತರಣೆಯಾಗಿದೆ ಎಂದು ಉಳ್ಳಾಲ ದರ್ಗಾ ಅಧ್ಯಕ್ಷ ಅಬ್ದುರ್ರಶೀದ್ ಹೇಳಿದರು.

ಹೆಲ್ಪ್‌ಇಂಡಿಯಾ ಫೌಂಡೇಶನ್ ವತಿಯಿಂದ ನಡೆದ ಬಡ ಹೆಣ್ಣುಮಕ್ಕಳಿಗೆ ಉಚಿತ ಟೈಲರಿಂಗ್ ಸರ್ಟಿಫಿಕೇಟ್ ಕೋರ್ಸ್ ತರಬೇತಿ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಬಿಜೆಪಿ ಕ್ಷೇತ್ರಾಧ್ಯಕ್ಷ ಸಂತೋಷ್ ಕುಮಾರ್ ರೈ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಇದೇ ಸಂದರ್ಭ ಕಿವುಡುತನ ಹೊಂದಿರುವವರಿಗೆ ಶ್ರವಣ ಯಂತ್ರ ವಿತರಿಸ ಲಾಯಿತು.

ಮೇಲಂಗಡಿ ಮಸೀದಿಯ ಅಧ್ಯಕ್ಷ ಫಾರೂಕ್ ಉಳ್ಳಾಲ್, ಮಂಜೇಶ್ವರ ಸ್ನೇಹಾಲಯದ ಸ್ಥಾಪಕ ಜೋಸೆಫ್ ಕ್ರಾಸ್ತ, ಭಾರತೀಯ ಕೃಷಿಕ ಸಮಾಜ ಜಿಲ್ಲಾಧ್ಯಕ್ಷ ಹೈದರ್ ಪರ್ತಿಪ್ಪಾಡಿ, ತುರವೇ ಸ್ಥಾಪಕಾಧ್ಯಕ್ಷ ಯೋಗೀಶ್ ಶೆಟ್ಟಿ ಜೆಪ್ಪು, ಉಳ್ಳಾಲ ನಗರಸಭಾಧ್ಯಕ್ಷ ಹುಸೈನ್ ಕುಂಞಿಮೋನು, ಸ್ಥಾಯಿ ಸಮಿತಿ ಅಧ್ಯಕ್ಷ ಉಸ್ಮಾನ್ ಕಲ್ಲಾಪು, ಬಿಜೆಪಿ ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಡಾ.ಕೆ.ಎ. ಮುನೀರ್ ಬಾವ, ಉದ್ಯಮಿ ಯು.ಎಚ್. ಹಸೈನಾರ್, ಹೆಲ್ಪ್ ಇಂಡಿಯಾ ಫೌಂಡೇಶನ್ ಸ್ಥಾಪಕ ಉಪಾಧ್ಯಕ್ಷ ಉಮರ್ ಫಾರೂಕ್, ಕಾರ್ಯದರ್ಶಿ ರಾಝಿಕ್ ಉಳ್ಳಾಲ್, ತರಬೇತುದಾರೆ ಜಯಶ್ರೀ ಉಪಸ್ಥಿತರಿದ್ದರು. ಸಂಚಾಲಕ ಹಸನ್ ಇಸ್ಮಾಯೀಲ್ ಕಿರಾಅತ್ ಪಠಿಸಿದರು. ಪತ್ರಿಕಾ ಕಾರ್ಯದರ್ಶಿ ಝಾಕಿರ್ ಹುಸೈನ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಮೀರ್ ತುಂಬೆಜಾ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News