×
Ad

ವಿಶ್ವಜಿತ್ ರಾಣೆ ಬಿಜೆಪಿಗೆ ಸೇರ್ಪಡೆ

Update: 2017-04-05 20:11 IST

ಪಣಜಿ, ಎ.5: ಕಾಂಗ್ರೆಸ್‌ಗೆ ರಾಜಿನಾಮೆ ನೀಡಿದ್ದ ಮಾಜಿ ಶಾಸಕ ವಿಶ್ವಜಿತ್ ರಾಣೆ ಗುರುವಾರ (ಇಂದು) ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಪಕ್ಷದ ಮುಖಂಡರು ತಿಳಿಸಿದ್ದಾರೆ.

ಗೋವಾದ ವಾಲ್‌ಪೋಯಿ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದಿಂದ ಚುನಾಯಿತರಾಗಿದ್ದ ರಾಣೆ, ಗೋವಾ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಮನೋಹರ್ ಪಾರಿಕ್ಕರ್ ವಿರುದ್ಧ ಮಂಡಿಸಲಾಗಿದ್ದ ಅವಿಶ್ವಾಸ ನಿರ್ಣಯದ ಮತದಾನದ ಸಂದರ್ಭ ಪಕ್ಷದ ವಿಪ್ ಉಲ್ಲಂಘಿಸಿ ಗೈರು ಹಾಜರಾಗಿದ್ದರು. ಬಳಿಕ ಕಾಂಗ್ರೆಸ್‌ಗೆ ಹಾಗೂ ತನ್ನ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ವಿಶ್ವಜಿತ್ ರಾಣೆ ಯಾವುದೇ ಶರತ್ತುಗಳಿಲ್ಲದೆ ಗುರುವಾರ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ವಿನಯ್ ತೆಂಡೂಲ್ಕರ್ ಪಿಟಿಐಗೆ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News