×
Ad

ಕಮಿಷನರ್ ಕಚೇರಿಗೆ ಮುತ್ತಿಗೆ ಯತ್ನ ಪ್ರಕರಣ: 72 ಮಂದಿ ಪ್ರತಿಭಟನಕಾರರ ಬಿಡುಗಡೆ

Update: 2017-04-05 20:57 IST

ಮಂಗಳೂರು, ಎ. 5: ಪೊಲೀಸ್ ದೌರ್ಜನ್ಯದಿಂದ ಕಿಡ್ನಿ ವೈಫಲ್ಯಗೊಂಡ ಅಹ್ಮದ್ ಖುರೇಶಿ ಅವರಿಗೆ ನ್ಯಾಯ ಒದಗಿಸುವಂತೆ ಮತ್ತು ದೌರ್ಜನ್ಯ ಪ್ರಕರಣವನ್ನು ತನಿಖೆಗೊಳಪಡಿಸುವಂತೆ ಪಿಎಫ್‌ಐ ಕಾರ್ಯಕರ್ತರು ನಡೆಸಿದ್ದ ಕಮಿಷನರ್ ಕಚೇರಿಗೆ ಮುತ್ತಿಗೆ ಯತ್ನ ಸಂದರ್ಭದಲ್ಲಿ ಬಂಧನಕ್ಕೊಳಗಾದ ಪ್ರತಿಭಟನಕಾರರಲ್ಲಿ 72 ಮಂದಿಯನ್ನು ಮಂಗಳವಾರ ರಾತ್ರಿ ಬಿಡುಗಡೆಗೊಳಿಸಲಾಗಿದೆ.

 ಪ್ರತಿಭಟನಕಾರರ ಮೇಲೆ ಲಾಠಿ ಪ್ರಹಾರ ನಡೆಸಿದ ಬಳಿಕ ಪೊಲೀಸರು 98 ಮಂದಿಯನ್ನು ವಶಕ್ಕೆ ಪಡೆದಿದ್ದರು. ಮಧ್ಯಾಹ್ನದ ಹೊತ್ತಿಗೆ ಪ್ರತಿಭಟನಕಾರರನ್ನು ಪೊಲೀಸರು ನಗರ ವೆನ್ಲಾಕ್ ಆಸ್ಪತ್ರೆಯಲ್ಲಿ ವೈದ್ಯಕೀಯ ಚಿಕಿತ್ಸೆಗೊಳಪಡಿಸಿ, ಬಳಿಕ ರಾತ್ರಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.

26 ಮಂದಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News