ಡಿಸಿ ಕೊಲೆಯತ್ನ ಪ್ರಕರಣ: ಮತ್ತೋರ್ವನ ಬಂಧನ
Update: 2017-04-05 22:01 IST
ಉಡುಪಿ, ಎ.5: ಜಿಲ್ಲಾಧಿಕಾರಿ ಮೇಲಿನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿ ದಂತೆ ಮತ್ತೋರ್ವನನ್ನು ಉಡುಪಿ ಪೊಲೀಸರು ಇಂದು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ ಎಂಟಕ್ಕೇರಿದೆ.
ಬಂಧಿತನನ್ನು ಕಂಡ್ಲೂರಿನ ಮುದಾಸ್ಸೀರ್(23) ಎಂದು ಗುರುತಿಸಲಾಗಿದೆ. ಆತನನ್ನು ಉಡುಪಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಲ್ಲದೆ ಕಂಡ್ಲೂರಿನಲ್ಲಿ ಅಕ್ರಮ ಮರಳು ಗಾರಿಕೆಗೆ ಸಂಬಂಧಿಸಿ ಎಂಟು ಬೋಟುಗಳನ್ನು, 32 ಲೋಡ್ ಮರಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕೆಲವು ಅಕ್ರಮ ಶೆಡ್‌ಗಳನ್ನು ತೆರವು ಗೊಳಿಸಲಾಗಿದೆ ಎಂದು ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ಟಿ.ಬಾಲಕೃಷ್ಣ ತಿಳಿಸಿದ್ದಾರೆ.