ಐಪಿಎಲ್‌ನಲ್ಲಿ ಪಾಕ್ ಆಟಗಾರರಿಗೆ ಅವಕಾಶ ಸಿಗಲಿ: ಕಪೂರ್
Update: 2017-04-05 23:32 IST
ಹೊಸದಿಲ್ಲಿ, ಎ.5: ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಪಾಕಿಸ್ತಾನದ ಆಟಗಾರರಿಗೆ ಅವಕಾಶ ನೀಡಬೇಕೆಂದು ಬಾಲಿವುಡ್‌ನ ಹಿರಿಯ ನಟ ರಿಷಿ ಕಪೂರ್ ಸಂಬಂಧಪಟ್ಟ ಫ್ರಾಂಚೈಸಿಗಳಿಗೆ ಟ್ವೀಟರ್‌ನ ಮೂಲಕ ಆಗ್ರಹಿಸಿದ್ದಾರೆ.
2008ರ ಬಳಿಕ ಐಪಿಎಲ್‌ನಲ್ಲಿ ಪಾಕಿಸ್ತಾನದ ಯಾವುದೇ ಆಟಗಾರರನ್ನು ಸೇರಿಸಿಕೊಂಡಿಲ್ಲ. ಅಝರ್ ಮಹಮೂದ್ ಬ್ರಿಟನ್ ಪಾಸ್‌ಪೋರ್ಟ್ ಹೊಂದಿದ್ದ ಹಿನ್ನೆಲೆಯಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಕೆಲವು ಐಪಿಎಲ್‌ಗಳಲ್ಲಿ ಪ್ರತಿನಿಧಿಸಿದ್ದರು. ಈ ವರ್ಷದ ಐಪಿಎಲ್‌ನಲ್ಲಿ ಅಫ್ಘಾನಿಸ್ತಾನದ ಇಬ್ಬರು ಕ್ರಿಕೆಟಿಗರಾದ ಮುಹಮ್ಮದ್ ನಬಿ ಹಾಗೂ ರಶೀದ್ ಖಾನ್ ಸನ್‌ರೈಸರ್ಸ್ ಹೈದರಾಬಾದ್‌ನಲ್ಲಿ ಮೊದಲ ಬಾರಿ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಕಪೂರ್ ಟ್ವೀಟರ್‌ಗೆ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದ್ದು, ಕ್ರೀಡೆಯನ್ನು ರಾಜಕೀಯದಿಂದ ದೂರ ಇಡಬೇಕು ಎಂದು ಅಭಿಪ್ರಾಯ ವ್ಯಕ್ತವಾಗಿದೆ.