×
Ad

ಹಿರಿಯ ಗಾಂಧಿವಾದಿ ಶ್ರೀನಿವಾಸಯ್ಯ ವಿಧಿವಶ

Update: 2017-04-06 10:15 IST

ಬೆಂಗಳೂರು,ಎ.6:ಮೂತ್ರಕೋಶದ ತೊಂದರೆಯಿಂದ ಬಳಲುತ್ತಿದ್ದ ಸ್ವಾತಂತ್ರ್ಯ ಹೋರಾಟಗಾರ ಹಾಗೂ ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷ ಡಾ. ಹೊ. ಶ್ರೀನಿವಾಸಯ್ಯ (93 )ಅವರು ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಗುರುವಾರ  ಬೆಳಗ್ಗೆ ನಿಧನರಾದರು.
ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಚೌದರಿ ಕೊಪ್ಪಲು ಗ್ರಾಮದವರಾದ ಶ್ರೀನಿವಾಸಯ್ಯನವರು ತಮ್ಮ ಬದುಕಿನುದ್ದಕ್ಕೂ ಗಾಂಧಿ ತತ್ವವನ್ನೇ ಪಾಲಿಸಿಕೊಂಡು ಬಂದಿದ್ದರು. 2015ರಲ್ಲಿ ಅವರಿಗೆ ಗಾಂಧಿ ಸೇವಾ ಪ್ರಶಸ್ತಿ ನೀಡಿ ಕರ್ನಾಟಕ ಸರಕಾರ ಗೌರವಿಸಿತ್ತು. 
 200ಕ್ಕೂ ಹೆಚ್ಚು ಗಾಂಧಿ ಅಧ್ಯಯನ ಕೇಂದ್ರಗಳ ಸ್ಥಾಪನೆಗೆ ಕಾರಣರಾಗಿದ್ದ ಶ್ರೀನಿವಾಸಯ್ಯ  ಸಹಕಾರ ತತ್ವದ ಮೇಲೆ ಸಹಕಾರಿ ಬ್ಯಾಂಕ್‌ಗಳನ್ನು ಪ್ರಾರಂಭಿಸಿದ್ದರು. ಗಾಂಧೀಜಿಯವರ ಕುರಿತು ಹಲವಾರು ಕೃತಿ ರಚಿಸಿದ್ದರು.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News