ಸಂದರ್ಶನ ಪೂರ್ವ ತಯಾರಿ ಕಾರ್ಯಾಗಾರ
ಮೂಡುಬಿದಿರೆ, ಎ.6:ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜಿನ ಮಾನವ ಸಂಪನ್ಮೂಲ ಘಟಕ ಮತ್ತು ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಜಂಟಿ ಆಶ್ರಯದಲ್ಲಿ ಅಂತಿಮ ಪದವಿ ತರಗತಿಯ ವಿದ್ಯಾರ್ಥಿಗಳಿಗಾಗಿ ನೇಮಕಾತಿ ಸಂದರ್ಶನಕ್ಕೆ ಬೇಕಾಗಿರುವ ಪೂರ್ವ ತಯಾರಿ ಸಿದ್ಧತೆಯ ಬಗ್ಗೆ ತರಬೇತಿ ಕಾರ್ಯಕ್ರಮ ನಡೆಯಿತು. ಸಂಪನ್ಮೂಲ ವ್ಯಕ್ತಿಗಳಾಗಿ ಕಾಲೇಜಿನ ಹಳೆವಿದ್ಯಾರ್ಥಿ ಹಾಗೂ ಬೆಂಗಳೂರಿನ ನೊವೊ ಟ್ರೀ ಮೈಂಡ್ಸ್ ಕನ್ಸಲ್ಟಿಂಗ್ ಲಿಮಿಟೆಡ್‌ನ ನಿರ್ದೇಶಕ ನಾಗರಾಜ್ ಭಾಗವಹಿಸಿ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡಿದರು.ಮಹಾವೀರ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗ ಮುಖ್ಯಸ್ಥ ಡಾ. ಬಿ. ವಾಮನ ಬಾಳಿಗ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನೊವೊ ಟ್ರೀ ಮೈಂಡ್ಸ್ ಕನ್ಸಲ್ಟಿಂಗ್ ಲಿಮಿಟೆಡ್‌ನ ಸಲಹೆಗಾರ ಸಹನಾ ಭಟ್ ಹಾಗೂ ವಿದ್ಯಾರ್ಥಿ ಕ್ಷೇಮಪಾಲನಾ ಸಂಘದ ಅಧ್ಯಕ್ಷ ಅಲಿಸ್ಟರ್ ಲೋಬೋ ಉಪಸ್ಥಿತರಿದ್ದರು. ಮಹಾವೀರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಹಾಗೂ ಹಳೆವಿದ್ಯಾರ್ಥಿ ಸಂಘದ ಕಾಯರ್ರ್ದರ್ಶಿ ಪ್ರೊ. ರಮೇಶ್ ಟ್ ಸ್ವಾಗತಿಸಿದರು. ಕಾಲೇಜಿನ ಮಾನವ ಸಂಪನ್ಮೂಲ ಘಟಕದ ಅಧ್ಯಾಪಕ ಸಲಹೆಗಾರ ಪ್ರೊ. ಪ್ರವೀಣ್ ವಂದಿಸಿದರು. ಅಂತಿಮ ಬಿ.ಕಾಂ ವಿದ್ಯಾರ್ಥಿನಿ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.