×
Ad

ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ಪ್ರಕರಣ: ಹರತಾಳ ಯಶಸ್ವಿ

Update: 2017-04-06 11:18 IST

ಕಾಸರಗೋಡು, ಎ.6: ಪಾಲಕ್ಕಾಡ್ ಪಾಂಬಾಡಿಯ ನೆಹರೂ ಕಾಲೇಜು ಎಂಜಿನಿಯರಿಂಗ್ ವಿದ್ಯಾರ್ಥಿ ಜಿಷ್ಣು ಪ್ರಣೋಯ್ ಆತ್ಮಹತ್ಯೆಗೆ ಸಂಬಂಧಪಟ್ಟಂತೆ ತಪ್ಪಿತಸ್ಥ ಕಾಲೇಜು ಮುಖ್ಯಸ್ಥರನ್ನು ಬಂಧಿಸದ ಪೊಲೀಸರ ಕ್ರಮವನ್ನು ಪ್ರತಿಭಟಿಸಿ ವಿಷ್ಣುವಿನ ಕುಟುಂಬಸ್ಥರು ಡಿಜಿಪಿ ಕಚೇರಿ ಮುಂಭಾಗದಲ್ಲಿ ಉಪವಾಸ ಸತ್ಯಾಗ್ರಹ ನಡೆಸಲು ತೆರಳಿದ್ದ ಸಂದರ್ಭದಲ್ಲಿ ನಡೆಸಿದ ದೌರ್ಜನ್ಯವನ್ನು ಪ್ರತಿಭಟಿಸಿ ಯುಡಿಎಫ್ ಮತ್ತು ಬಿಜೆಪಿ ಕರೆ ನೀಡಿರುವ 12 ಗಂಟೆಗಳ ಹರತಾಳ ಪೂರ್ಣವಾಗಿದೆ.ಬಸ್ಸು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಅಂಗಡಿ ಮುಂಗಟ್ಟುಗಳು ಬಹುತೇಕ ಮುಚ್ಚಿವೆ. ಕೆಲವೇ ಕೆಲ ಖಾಸಗಿ ವಾಹನಗಳು ಮಾತ್ರ ರಸ್ತೆಗಿಳಿದಿವೆ.ಹರತಾಳದ ಹಿನ್ನಲೆಯಲ್ಲಿ ಬಿಗು ಪೊಲೀಸ್ ಬಂದೋ ಬಸ್ತ್ ಏರ್ಪಡಿಸಲಾಗಿದೆ. ಅಹಿತಕರ ಘಟನೆಗಳು ನಡೆದ ಬಗ್ಗೆ ವರದಿಯಾಗಿಲ್ಲ.ಬಿಜೆಪಿ ಮತ್ತು ಯುಡಿಎಫ್ ಕಾರ್ಯಕರ್ತರು ಕಾಸರಗೋಡು ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲು ತೀರ್ಮಾನಿಸಿದ್ದಾರೆ. ಸರಕಾರಿ ಕಚೇರಿಗಳಲ್ಲಿ ಹಾಜರಾತಿ ವಿರಳವಾಗಿದೆ. ಎಂಡೋಸಲ್ಫಾನ್ ಸಂತ್ರಸ್ಥರಿಗೆ ಶಿಬಿರ ನಡೆಯುತ್ತಿರುವ ಕಳ್ಳಾರ್, ಪನತ್ತಡಿ ಗ್ರಾಮ ಪಂಚಾಯತ್, ಉತ್ಸವ ನಡೆಯುತ್ತಿರುವುದರಿಂದ ಕುಂಬಳೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹರತಾಳಕ್ಕೆ ವಿನಾಯಿತಿ ನೀಡಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News