×
Ad

ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದಲ್ಲಿ ಕರವೇ ಧರಣಿ

Update: 2017-04-06 13:49 IST

ಮಂಗಳೂರು, ಎ.6: ಮಂಗಳೂರು ಸೆಂಟ್ರಲ್ ರೈಲ್ವೆ ನಿಲ್ದಾಣದ ಅವ್ಯವಸ್ಥೆಯನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆಯ (ನಾರಾಯಣ ಗೌಡ ಬಣ) ದ.ಕ.ಜಿಲ್ಲಾ ಸಮಿತಿಯು ಗುರುವಾರ ರೈಲ್ವೆ ನಿಲ್ದಾಣದ ಮುಂದೆ ಧರಣಿ ನಡೆಸಿದರು.ಕೇಂದ್ರ ಮತ್ತು ರಾಜ್ಯ ಸರಕಾರವು ರೈಲ್ವೆ ನಿಲ್ದಾಣದ ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ ತಾಳತ್ತಿದೆ. ಇಲ್ಲಿನ ಸಮಸ್ಯೆಯನ್ನು ಅರಿತುಕೊಂಡು ಅವುಗಳಿಗೆ ಪರಿಹಾರ ಕಲ್ಪಿಸಲು ವಿಫಲವಾಗಿದೆ ಎಂದು ಧರಣಿ ನಿರತರು ಆರೋಪಿಸಿದರು.ಮಂಗಳೂರಿಗೆ ಪ್ರತ್ಯೇಕ ರೈಲ್ವೆ ವಿಭಾಗ ತೆರೆಯಬೇಕು, ಬೆಂಗಳೂರು-ಮಂಗಳೂರು ಹಗಲು ಮತ್ತು ರಾತ್ರಿ ರೈಲ್ವೆ ಆರಂಭಿಸಬೇಕು, ಕಾರವಾರ-ಯಶವಂತಪುರ ಹಗಲು ರೈಲು ವಾರವಿಡೀ ಚಲಿಸುವಂತೆ ವ್ಯವಸ್ಥೆ ಕಲ್ಪಿಸಬೇಕು, ರೈಲ್ವೆ ನಿಲ್ದಾಣದಲ್ಲಿ ಕನ್ನಡಿಗ ಉದ್ಯೋಗಿಗಳನ್ನು ನಿಯುಕ್ತಿಗೊಳಿಸಬೇಕು ಎಂದು ಧರಣಿ ನಿರತರು ಆಗ್ರಹಿಸಿದರು.ಧರಣಿಯಲ್ಲಿ ಕರವೇ ಜಿಲ್ಲಾಧ್ಯಕ್ಷ ಅನಿಲ್‌ದಾಸ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಝೀರ್ ಹುಸೈನ್ ಬೆಂಗರೆ, ಕಾರ್ಯದರ್ಶಿ ಇಕ್ಬಾಲ್ ದೇರಳಕಟ್ಟೆ, ಖಾದರ್ ತಲಪಾಡಿ, ಅರುಣ್ ಕುಮಾರ್, ರಿಯಾಝ್ ಹರೇಕಳ, ರೈಲ್ವೆ ಸಲಹಾ ಸಮಿತಿ ಸದಸ್ಯ ಸುದರ್ಶನ್, ಉಡುಪಿ ಜಿಲ್ಲಾ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ ಆರ್.ಎಲ್.ಡಯಾಸ್ ಮತಿತಿತರರು ಪಾಲ್ಗೊಂಡಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News