×
Ad

ದೌರ್ಜನ್ಯ ಆಗಿದ್ದಲ್ಲಿ ಸಂಬಂಧಪಟ್ಟ ಪೊಲೀಸರ ಮೇಲೆ ಕಠಿಣ ಕ್ರಮ: ಸಚಿವ ರೈ

Update: 2017-04-06 17:13 IST

ಮಂಗಳೂರು, ಎ.6: ಅಹ್ಮದ್ ಖುರೇಷಿ ಮೇಲೆ ಪೊಲೀಸ್ ದೌರ್ಜನ್ಯ ಆಗಿರುವುದು ನಿಜವಾಗಿದ್ದಲ್ಲಿ ಅಂತಹ ಪೊಲೀಸರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.

ಜಿಲ್ಲಾ ಪಂಚಾಯತ್‌ನಲ್ಲಿಂದು ಕೆಡಿಪಿ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರ ಪ್ರಶ್ನೆಗೆ ಅವರು ಈ ಪ್ರತಿಕ್ರಿಯೆ ನೀಡಿದರು.

ದೌರ್ಜನ್ಯ ಆಗಿರುವ ಬಗ್ಗೆ ನನಗೆ ಮಾಹಿತಿ ಇರಲಿಲ್ಲ. ಮಾಧ್ಯಮದ ಮೂಲಕ ನನಗೆ ವಿಷಯ ತಿಳಿಯಿತು. ಇದರಲ್ಲಿ ನಿಜಾಂಶ ಇದ್ದಲ್ಲಿ ಕಾನೂನಾತ್ಮಕ ಕ್ರಮ ಕೈಗೊಳ್ಳಲಾಗುವುದು. ಉಳಿದಂತೆ ನಗರದ ಪೊಲೀಸ್ ಆಯುಕ್ತರ ಕಚೇರಿ ಎದುರು ನಡೆದ ಲಾಠಿ ಜಾರ್ಜ್ ಬಗ್ಗೆ ನನಗೆ ಯಾವುದೇ ವರದಿ ಬಂದಿಲ್ಲ. ಕಾರಣ ಏನು ಎಂಬುದನ್ನೂ ತಿಳಿದುಕೊಳ್ಳಬೇಕಿದೆ ಎಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News