×
Ad

ದಲಿತ ಅನಾಥ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣ: ಓರ್ವನ ಬಂಧನ

Update: 2017-04-06 18:46 IST

ಬೆಳ್ತಂಗಡಿ, ಎ.6: ದಲಿತ ಸಮುದಾಯದ ಅನಾಥ ಬಾಲಕಿಯನ್ನು ಗರ್ಭಿಣಿಯಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ವಿಜಯ ಎಂಬಾತನನ್ನು ಧರ್ಮಸ್ಥಳ ಪೋಲೀಸರು ಗುರುವಾರ ಬಂಧಿಸಿ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.

ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿಯೆಂದು ಗುರುತಿಸಲಾಗಿದ್ದ ಈತ ಘಟನೆ ಬಹಿರಂಗಗೊಳ್ಳುತ್ತಿದ್ದಂತೆಯೇ ಊರು ಬಿಟ್ಟು ಪರಾರಿಯಾಗಿದ್ದ ತಲೆಮರೆಸಿಕೊಂಡಿದ್ದ ಈತನನ್ನು ಪೋಲೀಸರು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಇದರೊಂದಿಗೆ ಪ್ರಕರಣದಲ್ಲಿ ಇವರೆಗೆ ಐದು ಮಂದಿಯನ್ನು ಬಂಧಿಸಿದಂತಾಗಿದೆ.

ಇನ್ನೂ ಕೆಲವರು ತಲೆ ಮರೆಸಿಕೊಂಡಿದ್ದು ಅವರಿಗಾಗಿಯೂ ಹುಡುಕಾಟ ಮುಂದುವರಿದಿದೆ. ಬಂಟ್ವಾಳ ಡಿವೈಎಸ್‌ಪಿ ರವೀಶ್ ಸಿ ಆರ್ ಮಾರ್ಗದರ್ಶನದಲ್ಲಿ ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ಅವರ ನೇತೃತ್ವದಲ್ಲಿ ಧರ್ಮಸ್ಥಳ ಪೋಲೀಸರು ಪ್ರಕರಣದ ತನಿಖೆ ಮುಂದುವರಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News