ವಿದ್ಯುತ್ ಶಾಕ್ ಸರ್ಕ್ಯೂಟ್: ಇಬ್ಬರು ಮೆಸ್ಕಾಂ ಸಿಬ್ಬಂದಿಗೆ ಗಂಭೀರ ಗಾಯ
Update: 2017-04-06 18:52 IST
ಬೆಳ್ತಂಗಡಿ, ಎ.6: ವಿದ್ಯುತ್ ಶಾಕ್ ಸರ್ಕ್ಯೂಟ್ ನಿಂದ ಇಬ್ಬರು ಮೆಸ್ಕಾಂ ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾದ ಘಟನೆ ಗುರುವಾರ ಮೆಸ್ಕಾಂ ಕಚೇರಿಯಲ್ಲಿ ನಡೆದಿದೆ.
ಗಾಯಾಳುಗಳು ಮೆಸ್ಕಾಂ ತಾಂತ್ರಿಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂಜಿನಿಯರ್ ಹರೀಶ್ವರ್ (43) ಹಾಗೂ ಸಹಾಯಕ ವೆಂಕಟೇಶ್ (24) ಎಂಬವರಾಗಿದ್ದಾರೆ.
ಇವರನ್ನು ಕೂಡಲೇ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೆಸ್ಕಾಂ ತಾಂತ್ರಿಕ ಕಚೇರಿಯಲ್ಲಿ ದುರಸ್ತಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿಯಬೇಕಾಗಿದೆ.