×
Ad

ಮರಳು ಮಾಫಿಯಾ ಮಟ್ಟ ಹಾಕಲು ಬಿಜೆಪಿ ಆಗ್ರಹ

Update: 2017-04-06 19:20 IST

ಮಂಗಳೂರು, ಎ.6: ದ.ಕ.ಜಿಲ್ಲೆಯಲ್ಲಿ ಮರಳು ಮಾಫಿಯಾ ಮತ್ತು ಪಿಎಫ್ ಯಂತಹ ಸಂಘಟನೆಗಳನ್ನು ಮಟ್ಟ ಹಾಕಬೇಕು ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಸಂಜೀವ ಮಠಂದೂರು ಆಗ್ರಹಿಸಿದ್ದಾರೆ.

ಗುರುವಾರ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಮರಳು ದಂಧೆ ಮತ್ತು ಮತೀಯ ಶಕ್ತಿಗಳ ಅಟ್ಟಹಾಸ ಮುಂದುವರಿದಿದೆ. ಅವಿಭಜಿತ ದ.ಕ.ಜಿಲ್ಲೆಯಲ್ಲಿ ನಡೆದ ಘಟನೆ ಬಿಹಾರ ರಾಜ್ಯವನ್ನು ನೆನಪಿಸುವಂತಿದೆ. ರಾಜ್ಯದಲ್ಲಿ ಪಿಎಫ್‌ಐ ಸಂಘಟನೆ ಬೆಳೆಯಲು ರಾಜ್ಯ ಸರಕಾರದ ತುಷ್ಟೀಕರಣ ನೀತಿಯೇ ಕಾರಣ ಎಂದು ಆರೋಪಿಸಿದರು.

2015ರ ಜೂನ್‌ನಲ್ಲಿ ಮತೀಯ ಸಂಘಟನೆಗಳಿಗೆ ಸಂಬಂಧ ಪಟ್ಟ 40 ಪ್ರಕರಣಗಳನ್ನು ರಾಜ್ಯ ಸರಕಾರ ಕೈ ಬಿಟ್ಟಿದೆ. ಪ್ರಕರಣಗಳಲ್ಲಿ ಭಾಗಿಯಾಗಿರುವ 1,400 ಆರೋಪಿಗಳನ್ನು ಬಿಡುಗಡೆ ಮಾಡಲಾಗಿದೆ. ಇದರಿಂದ ಪ್ರೇರಣೆ ಪಡೆದಿರುವ ಪಿಎಫ್ಐ ಯಂತಹ ಸಂಘಟನೆಗಳು ಪೊಲೀಸ್ ಠಾಣೆಗಳು ಮತ್ತು ಕಮಿಷನರ್ ಕಚೇರಿಗೆ ಮುತ್ತಿಗೆ, ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ನಡೆಸುತ್ತಿವೆ ಎಂದು ಸಂಜೀವ ಮಠಂದೂರು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಎನ್.ಯೋಗೀಶ ಭಟ್, ಕಿಶೋರ್ ರೈ, ಎಂ.ಸುದರ್ಶನ್, ವಿಕಾಸ್ ಪುತ್ತೂರು, ಜಿತೇಂದ್ರ ಕೊಟ್ಟಾರಿ, ಸಂಜಯ ಪ್ರಭು, ವೇದವ್ಯಾಸ ಕಾಮತ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News