ಮಸೀದಿ ನಿರ್ಮಾಣಕ್ಕೆ ಅವಕಾಶ ನೀಡದಿರಲು ವಿಶ್ವ ಹಿಂದೂ ಪರಿಷತ್ ಆಗ್ರಹ
ಬೆಂಗಳೂರು, ಎ. 6: ಕೇಂದ್ರ ಸರಕಾರವು ಶೀಘ್ರವಾಗಿ ಕಾನೂನಿನ ಮೂಲಕ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಅನುಮತಿ ನೀಡಬೇಕು. ಯಾವುದೇ ಕಾರಣಕ್ಕೂ ಬಾಬರ್ ಹೆಸರಿನಲ್ಲಿ ದೇಶದ ಯಾವುದೇ ಭಾಗದಲ್ಲಿ ಮಸೀದಿ ನಿರ್ಮಾಣ ಮಾಡಲು ಮುಂದಾಗಬಾರದು ಎಂದು ವಿಶ್ವಹಿಂದು ಪರಿಷತ್ ಆಗ್ರಹಿಸಿದೆ.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕ್ಷೇತ್ರೀಯ ಸಂಘಟನಾ ಕಾರ್ಯದರ್ಶಿ ಗೋಪಾಲ್, ಶ್ರೀರಾಮ ಜನ್ಮ ದಿನದ ಅಂಗವಾಗಿ ಒಂದು ವಾರಗಳ ಕಾಲ ರಾಜ್ಯಾದ್ಯಂತ ರಾಮೋತ್ಸವವನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಇದರಲ್ಲಿ ರಾಮನ ಜೀವನ ಹಾಗೂ ರಾಮಾಯಣದ ಮೌಲ್ಯಗಳನ್ನು ಪ್ರಚಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಅಯೋಧ್ಯೆಯ ಸಾಂಸ್ಕೃತಿಕ ಸೀಮೆಗಳಲ್ಲಿ ಯಾವುದೇ ಮಸೀದಿ ನಿರ್ಮಾಣ ಮಾಡಬಾರದು. ಎಲ್ಲ ಜನಪ್ರತಿನಿಧಿಗಳು ಪಕ್ಷಭೇದ ಮರೆತು ರಾಮ ಮಂದಿರ ನಿರ್ಮಾಣಕ್ಕೆ ಬೆಂಬಲಿಸಬೇಕು. ರಾಮ ಮಂದಿರ ನಿರ್ಮಾಣ ಮಾಡಲು ತಡ ಮಾಡಲು ನಾವು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಹಮ್ಮಿಕೊಳ್ಳುತ್ತೇವೆ ಎಂದು ಅವರು ತಿಳಿಸಿದರು.