ಮಹಿಳಾ ಮಂಡಲಗಳ ಒಕ್ಕೂಟದಿಂದ ಪ್ರತಿಭಟನೆ

Update: 2017-04-06 18:31 GMT

ಉಡುಪಿ, ಎ.6: ಕಂಡ್ಲೂರು ಸಮೀಪದ ಕಾವ್ರಾಡಿ ಎಂಬಲ್ಲಿ ನಡೆಯುತಿದ್ದ ಅಕ್ರಮ ಮರಳುಗಾರಿಕೆ ಅಡ್ಡೆಗೆ ಹಠಾತ್ ದಾಳಿ ನಡೆಸಿದ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಹಾಗೂ ಕುಂದಾಪುರ ಸಹಾಯಕ ಉಪವಿಭಾಗಾಧಿಕಾರಿ ಶಿಲ್ಪಾ ನಾಗ್‌ರ ಮೇಲೆ ಮರಳು ಮಾಫಿಯಾ ದಂಧೆಕೋರರು ನಡೆಸಿದ ಹಲ್ಲೆ ಹಾಗೂ ಕೊಲೆಯತ್ನವನ್ನು ಉಡುಪಿ ಜಿಲ್ಲಾ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಸ್ತ್ರೀಶಕ್ತಿ ಸಂಘಟನೆಗಳು ಖಂಡಿಸಿ ಪ್ರತಿಭಟನೆ ನಡೆಸಿದವು.

ನಗರದ ಕ್ಲಾಕ್‌ಟವರ್ ಎದುರು ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದ ಅಧ್ಯಕ್ಷೆ ಹಾಗೂ ಜಿಪಂ ಉಪಾಧ್ಯಕ್ಷೆ ಶೀಲಾ ಕೆ.ಶೆಟ್ಟಿ ಅವರು ಮಹಿಳಾ ಅಧಿಕಾರಿಗಳನ್ನು ಕರ್ತವ್ಯ ನಿರ್ವಹಣೆ ಸಂದರ್ಭದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವರ ಮೇಲೆ ಹಲ್ಲೆಗೆ ಯತ್ನಿಸಿದ್ದು, ತೀರಾ ಖಂಡನೀಯ ಎಂದರು.

ಪ್ರತಿಭಟನೆಯ ಬಳಿಕ ಪ್ರಕರಣದ ಆರೋಪಿಗಳನ್ನು ಬಂಧಿಸುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು. ಒಕ್ಕೂಟದ ಅಧ್ಯಕ್ಷೆ ಸರಳಾ ಕಾಂಚನ್, ಕಾರ್ಯದರ್ಶಿ ವಸಂತಿ ಕೊರಡ್ಕಲ್, ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಧನಲಕ್ಷ್ಮಿ, ಜಿಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಸಂಘದ ಅಧ್ಯಕ್ಷೆ ಯಮುನಾ ಆರ್.ಬಂಗೇರ, ತಾಲೂಕು ಸ್ತ್ರೀಶಕ್ತಿ ಸಂಘದ ಅಧ್ಯಕ್ಷೆ ಜಯಂತಿ, ಜಿಪಂನ ಮಾಜಿ ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಜಿಪಂನ ಮಾಜಿ ಉಪಾಧ್ಯಕ್ಷೆ ಲೀನಾ ಮಥಾಯಸ್, ರತಿ ಆರ್.ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News