ಆರೋಪಿಗಳನ್ನು ಶೀಘ್ರ ಬಂಧಿಸುವಂತೆ ಎಸ್ಪಿಗೆ ಮನವಿ
ಉಡುಪಿ, ಎ.6: ಜಿಲ್ಲೆಯ ಕಂಡ್ಲೂರಿನಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಸುತ್ತಿದ್ದ ಅಡ್ಡೆಗೆ ದಾಳಿ ನಡೆಸಿದ ಸಂದರ್ಭ ಉಡುಪಿ ಜಿಲ್ಲಾಧಿಕಾರಿಯ ಮೇಲೆ ಹಲ್ಲೆ ಯತ್ನ ನಡೆಸಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಹ್ಯೂಮನ್ ರೈಟ್ಸ್ ಫೆಡರೇಶನ್ ಆಫ್ ಇಂಡಿಯಾದ ಉಡುಪಿ ವಿಭಾಗದ ಸದಸ್ಯರು ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಅರ್ಪಿಸಿದರು.
ಮಹಿಳಾ ಅಧಿಕಾರಿಗಳನ್ನು ಅಮಾನವೀಯ ರೀತಿಯಲ್ಲಿ ನಡೆಸಿಕೊಂಡಿದ್ದು ಖಂಡನೀಯ. ಜಿಲ್ಲಾಧಿಕಾರಿಯ ಮೇಲೆ ಹಲ್ಲೆ ಹಾಗೂ ಕೊಲೆ ನಡೆಸಲು ಪ್ರಯತ್ನಿಸಿದ್ದ ಎಲ್ಲಾ ಅರೋಪಿಗಳನ್ನು ಶೀಘ್ರ ಬಂಧಿಸುವಂತೆ ಹಾಗೂ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕುವಂತೆ ಮನವಿಯಲ್ಲಿ ಒತ್ತಾಯಿಸಲಾಗಿದೆ.
ಈ ಸಂದರ್ಭದಲ್ಲಿ ಫೆಡರೇಶನ್‌ನ ಉಡುಪಿ ಜಿಲ್ಲಾಧ್ಯಕ್ಷೆ ಪೂರ್ಣಿಮಾ ಶೆಟ್ಟಿ, ಕಾರ್ಯದರ್ಶಿ ಉದಯ್ ಕೆ. ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರಸಾದ್ ಆಚಾರ್ಯ, ದೂರು ವಿಭಾಗದ ಆಶೋಕ್ ಪೂಜಾರಿ, ಶಿಸ್ತು ಪಾಲನಾ ಸಮಿತಿಯ ಬಾಲರಾಜ್, ಪ್ರಸಾದ್ ಪೂಜಾರಿ ಹಾಗೂ ಉದಯಕುಮಾರ್ ಹಿರಿಯಡಕ ಉಪಸ್ಥಿತರಿದ್ದರು.