ಮರಕ್ಕೆ ಢಿಕ್ಕಿ ಹೊಡೆದ ಕಾರು: ಇಬ್ಬರು ಮೃತ್ಯು

Update: 2017-04-08 17:51 GMT

ತುಮಕೂರು, ಎ.8: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆಬದಿಗೆ ಬಿದ್ದು ನಂತರ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಮತ್ತೋರ್ವ ಆಸ್ಪತ್ರೆಗೆ ಸಾಗಿಸುವಾಗ ಸಾವನ್ನಪ್ಪಿರುವ ಘಟನೆ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48 ರ ಚಿಕ್ಕನಹಳ್ಳಿ ಬಳಿ ಘಟನೆ ನಡೆದಿದೆ.

ಬಳ್ಳಾರಿ ಮೂಲದ ಅನಿಲ್ (45) ಸ್ಥಳದಲ್ಲೇ ಮೃತಪಟ್ಟರೆ, ಆಸ್ತರ್ (48) ಆಸ್ಪತ್ರೆ ಸಾಗಿಸುವಾಗ ಕೊನೆಯುಸಿರೆಳೆದಿದ್ದಾರೆ. 

ಇವರು ಬೆಂಗಳೂರುನಿಂದ ಬಳ್ಳಾರಿಗೆ ಹೋಗುತ್ತಿರುವಾಗ ಮಧ್ಯಾಹ್ನ ಸುಮಾರು 2:30ರ ಸಮಯದಲ್ಲಿ ರಾಷ್ಟ್ರೀಯ ಹೆದ್ದಾರಿ 48 ರ ಚಿಕ್ಕನಹಳ್ಳಿ ಬಳಿ ನಿಯಂತ್ರಣ ತಪ್ಪಿದ ಕಾರು ರಸ್ತೆಬದಿಗೆ ಬಿದ್ದು ನಂತರ ಮರಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಅನಿಲ್ (45) ಸ್ಥಳದಲ್ಲೇ ಮೃತಪಟ್ಟರೆ, ಆಸ್ತರ್ (48) ಆಸ್ಪತ್ರೆ ಸಾಗಿಸುವಾಗ ಮೃತಪಟ್ಟಿದ್ದಾರೆ. ಸಹ ಪ್ರಯಾಣಿಕರು ಸಣ್ಣಪುಟ್ಟ ಗಾಯದೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News