ನೇಣು ಬಿಗಿದು ಎಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ

Update: 2017-04-08 18:17 GMT

ಮಂಗಳೂರು, ಎ. 8: ನಗರದ ಹೊರವಲಯದ ನೀರುಮಾರ್ಗದಲ್ಲಿರುವ ಕರಾವಳಿ ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಗ್ಗೆ ನಡೆದಿದೆ.

ಶಿವಮೊಗ್ಗದ ತೀರ್ಥಹಳ್ಳಿಯ ನಿವಾಸಿ ಲಾರೆನ್ಸ್ ಡಿಸೋಜ (21) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ವೈಯಕ್ತಿಕ ಸಮಸ್ಯೆಯಿಂದ ಆತ್ಮಹತ್ಯೆ ಮಾಡಿಕೊಂಡಿರಬೇಕೆಂದು ಶಂಕಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News