×
Ad

ಮಂಗಳೂರಿನಾದ್ಯಂತ ಸಂಭ್ರಮದ "ಗರಿಗಳ ರವಿವಾರ"

Update: 2017-04-09 21:26 IST

ಮಂಗಳೂರು, ಎ. 9: ಎರಡು ಸಾವಿರ ವರ್ಷಗಳ ಹಿಂದೆ ಯೇಸುಕ್ರಿಸ್ತರು ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ಸ್ವಾಗತಿಸಿದ ಘಟನೆಯನ್ನು ಸ್ಮರಿಸಿ ಕ್ರೈಸ್ತರು ಇಂದು ಗರಿಗಳ ರವಿವಾರವನ್ನು ಆಚರಿಸಿದರು.

ಬಿಷಪ್ ರೆ.ಡಾ.ಅಲೋಶಿಯಸ್ ಪಾವ್ಲ್ ಡಿಸೋಜ ನಗರದ ರೊಜಾರಿಯೋ ಕೆಥೆಡ್ರಲ್‌ನಲ್ಲಿ ನಡೆದ ವಿಶೇಷ ಪ್ರಾರ್ಥನೆ ಮತ್ತು ಬಲಿ ಪೂಜೆಯಲ್ಲಿ ಪಾಲ್ಗೊಂಡು ಸಂದೇಶ ನೀಡಿದರು. ಎಲ್ಲಾ ಚರ್ಚ್‌ಗಳಲ್ಲಿ ಸ್ಥಳೀಯ ಧರ್ಮಗುರುಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.  ಚರ್ಚ್ ಆವರಣದಲ್ಲಿ ಭಾಗವಹಿಸಿದ್ದ ಎಲ್ಲಾ ಕ್ರೈಸ್ತರಿಗೆ ತೆಂಗಿನ ಗರಿಗಳನ್ನು ವಿತರಿಸಲಾಯಿತು. ಬಳಿಕ ಬಲಿ ಪೂಜೆ ನೆರವೇರಿತು. 

ಹಿನ್ನೆಲೆ: ಯೇಸು ಕ್ರಿಸ್ತರು ಬೆಥಾನಿಯಾದಿಂದ ದೇವನಗರಿ ಎಂದೇ ಹೇಳಲಾದ ಜೆರುಸಲೆಮಿಗೆ ಪ್ರವೇಶ ಮಾಡುವಾಗ ಅಲ್ಲಿನ ಜನರು ‘ಒಲಿವ್’ ಮರದ ಗರಿಗಳನ್ನು ಹಿಡಿದು ವೈಭವದಿಂದ ಸ್ವಾಗತಿಸಿ ಬರ ಮಾಡಿಕೊಂಡಿದ್ದರು ಎಂಬ ಉಲ್ಲೇಖ ಬೈಬಲ್‌ನಲ್ಲಿದೆ. ಈ ಹಿನ್ನೆಲೆಯಲ್ಲಿ ಗರಿಗಳ ರವಿವಾರ ಆಚರಿಸಲಾಗುತ್ತದೆ. ಪ್ರಸ್ತುತ ಇಲ್ಲಿ ‘ಒಲಿವ್’ ಮರದ ಗರಿಗಳ ಬದಲು ತೆಂಗಿನ ಗರಿಗಳನ್ನು ಸಾಂಕೇತಿಕವಾಗಿ ಹಿಡಿದು ಪ್ರಾರ್ಥನೆ ಸಲ್ಲಸಲಾಗುತ್ತದೆ. ಗರಿಗಳ ರವಿವಾರ ಆಚರಣೆಯೊಂದಿಗೆ ಕ್ರೈಸ್ತರ ಪವಿತ್ರ ಸಪ್ತಾಹ ಆರಂಭಗೊಳ್ಳುತ್ತದೆ. ಯೇಸು ಕ್ರಿಸ್ತರು ಶಿಲುಬೆಯಲ್ಲಿ ಮರಣಿಸಿದ ದಿನ ಅಥವಾ ಶುಭ ಶುಕ್ರವಾರದ ಮುಂಚಿನ ರವಿವಾರವನ್ನು ಗರಿಗಳ ರವಿವಾರವಾಗಿ ಆಚರಿಸಲಾಗುತ್ತದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News