ವಿಶೇಷ ಮಲೇರಿಯಾ ನಿಯಂತ್ರಣ ಕಾರ್ಯಕ್ರಮ
Update: 2017-04-10 22:49 IST
ಮಂಗಳೂರು, ಎ. 10: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ರೋಗವಾಹನ ಆಶ್ರಿತ ರೋಗಗಳ ನಿಯಂತ್ರಣ ಅಧಿಕಾರಿ ಕಚೇರಿ ಇವುಗಳ ಆಶ್ರಯದಲ್ಲಿ ನಗರ ಫೋರಂ ಫಿಝಾ ಮಾಲ್‌ನಲ್ಲಿ ವಿಶೇಷ ಮಲೇರಿಯಾ ನಿಯಂತ್ರಣ ಕಾರ್ಯಕ್ರಮ ಸೋಮವಾರ ಸಂಜೆ ನಡೆಯಿತು.
ಮೇಯರ್ ಕವಿತಾ ಸನಿಲ್ ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಪಾಲಿಕೆಯು ಮಲೇರಿಯಾ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳು ಕೈಗೊಂಡಿದ್ದು, ಮಲೇರಿಯಾ ನಿಯಂತ್ರಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದರು.
ಉಪಮೇಯರ್ ರಜನೀಶ್, ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ನಾಗವೇಣಿ, ಫಿಝಾ ಮಾಲ್‌ನ ಜಿ.ಎಂ.ಮನೋಜ್ ಸಿಂಗ್, ಡಿಎಚ್ ಒ ರಾಮಕೃಷ್ಣ ರಾವ್, ಜಿಲ್ಲಾ ರೋಗವಾಹಕ ಆಶ್ರಿತ ರೋಗ ರೋಗಗಳ ನಿಯಂತ್ರಣ ಅಧಿಕಾರಿ ಅರುಣ್ ಕುಮಾರ್, ಆರೋಗ್ಯ ಇಲಾಖೆಯ ಸಿಕಂದರ್ ಪಾಷ ,ಜಗದೀಶ್ ಮೊದಲಾದವರು ಉಪಸ್ಥಿತರಿದ್ದರು.