×
Ad

ಮಕ್ಕಳ ರಾಷ್ಟ್ರಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2017-04-10 22:51 IST

ಉಡುಪಿ, ಎ.10: ಕಲೆ, ಸಂಸ್ಕೃತಿ ಹಾಗೂ ಯಾವುದೇ ಕ್ಷೇತ್ರದಲ್ಲಿ ನಾವೀನ್ಯತೆ, ರಾಷ್ಟ್ರೀಯ ಮಟ್ಟದಲ್ಲಿ ತಾರ್ಕಿಕ ಸಾಧನೆ, ಕ್ರೀಡೆ, ಸಮಾಜ ಸೇವೆ, ಸಂಗೀತ ಮತ್ತು ಕೇಂದ್ರ ಆಯ್ಕೆಸಮಿತಿ ನಿರ್ಧರಿಸುವ ಮಾನ್ಯತೆಗೆ ಯೋಗ್ಯವಾದ ಯಾವುದೇ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಕ್ಕಳಿಗೆ ರಾಷ್ಟ್ರ ಪ್ರಶಸ್ತಿ ಯನ್ನು ಭಾರತ ಸರಕಾರ ನೀಡುತ್ತಿದೆ.

ಭಾರತದಲ್ಲಿ ನೆಲೆಸಿರುವ ಮತ್ತು ಮೇಲಿನ ಕ್ಷೇತ್ರಗಳಲ್ಲಿ ಅಸಾಧಾರಣ ಸಾಧನೆ ಮಾಡಿರುವ 5ರಿಂದ 18 ವರ್ಷದೊಳಗಿನ ಅಂದರೆ 1999 ಆ.1 ಹಾಗೂ ನಂತರ ಹುಟ್ಟಿದ ಮಕ್ಕಳನ್ನು 2017ನೆ ಸಾಲಿನ ಪ್ರಶಸ್ತಿಗೆ ಆಯ್ಕೆ ಮಾಡಲಾಗುವುದು. ಈ ರಾಷ್ಟ್ರಮಟ್ಟದ ಪ್ರಶಸ್ತಿ ಒಂದು ಚಿನ್ನದ ಪದಕ, 20,000 ರೂ., 10,000 ರೂ. ವೌಲ್ಯದ ಪುಸ್ತಕ ವೋಚರ್ ಮತ್ತು ಪ್ರಶಸ್ತಿ ಪತ್ರ ಹೊಂದಿರುತ್ತದೆ. ಅಲ್ಲದೇ 35 ಬೆಳ್ಳಿ ಪದಕ (ಪ್ರತಿ ರಾಜ್ಯ ಕೇಂದ್ರಾಡಳಿತ ಪ್ರದೇಶಕ್ಕೆ ಒಂದರಂತೆ) 10,000 ರೂ., 3,000 ರೂ. ವೌಲ್ಯದ ಪುಸ್ತಕ ಹಾಗೂ ಪ್ರಶಸ್ತಿ ಪತ್ರ ಒಳಗೊಂಡಿರುತ್ತದೆ.

ಪ್ರಶಸ್ತಿಗೆ ಆಯ್ಕೆಯಾಗುವ ಮಕ್ಕಳು ಅಪ್ರತಿಮ ಪ್ರತಿಭೆಯುಳ್ಳವರಾಗಿದ್ದು, ಇವರ ಸಾಧನೆಯನ್ನು ಸಮರ್ಥಿಸಲು ಪೂರಕ ದಾಖಲಾತಿಗಳನ್ನು ಒದಗಿಸಬೇಕು. 2017ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿದ ಅರ್ಜಿ ನಮೂನೆಗಳನ್ನು ಸಂಬಂಧಿಸಿದ ಜಿಲ್ಲೆಯ ಉಪ ನಿರ್ದೇಶಕರ ಕಚೇರಿ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪಡೆದು ಆಂಗ್ಲ ಭಾಷೆಯಲ್ಲಿ ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಗಳನ್ನು ಮೇ 30ರೊಳಗೆ ತಲುಪುವಂತೆ ಜಿಲ್ಲಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಇವರಿಗೆ ಕಳುಹಿಸಬೇಕು.

ಅರ್ಜಿ ನಮೂನೆ ಮತ್ತು ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಕೊಠಡಿ ಸಂಖ್ಯೆ:204, ಒಂದನೇ ಮಹಡಿ, ರಜತಾದ್ರಿ, ಮಣಿಪಾಲ (ದೂರವಾಣಿ:0820-2574972,2574978) ಇವರನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News