ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆಗ್ರಹಿಸಿ ಮನವಿ
Update: 2017-04-11 20:08 IST
ಮಂಗಳೂರು, ಎ. 11: ಅಹ್ಮದ್ ಖುರೇಷಿ ಎಂಬವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಸಿಸಿಬಿ ಇನ್ಸ್‌ಪೆಕ್ಟರ್ ಸುನೀಲ್ ನಾಯ್ಕ್ ಹಾಗೂ ಸಬ್ ಇನ್ಸ್‌ಪೆಕ್ಟರ್ ಶಾಂ ಸುಂದರ್ ಸೇರಿದಂತೆ ತಪ್ಪಿತಸ್ಥ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿ, ಅವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಆಲ್ ಇಂಡಿಯಾ ಇಮಾಮ್ ಕೌನ್ಸಿಲ್ ನಿಯೋಗವು ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಅವರಿಗೆ ಮನವಿ ಸಲ್ಲಿಸಿ ಆಗ್ರಹಿಸಿದೆ.
ಅಕ್ರಮವಾಗಿ ಬಂಧನಕ್ಕೊಳಗಾಗಿರುವ ಪ್ರತಿಭಟನಕಾರರ ಮೇಲೆ ದಾಖಲಾಗಿರುವ ಮೊಕದ್ದಮೆಯನ್ನು ಹಿಂಪಡೆಯಬೇಕು ಮತ್ತು ಪೊಲೀಸ್ ದೌರ್ಜನ್ಯಕ್ಕೊಳಗಾಗಿರುವ ಅಹ್ಮದ್ ಖುರೇಷ್‌ಗೆ ಸೂಕ್ತ ಪರಿಹಾರವನ್ನು ಕಲ್ಪಿಸಬೇಕೆಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.
ಡಿಸಿಪಿ ಕೆ.ಎಂ.ಶಾಂತರಾಜು ಅವರ ಮೂಲಕ ಮನವಿ ಸಲ್ಲಸಲಾಯಿತು.
ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್ ಜಿಲ್ಲಾ ಕಾರ್ಯದರ್ಶಿ ಹಾರಿಸ್ ಹನೀಫಿ, ಯೂಸುಫ್ ಮಿಸ್‌ಬಾಹಿ, ಮಜೀದ್ ನಿಝಾಮಿ, ಜಾಫರ್ ಫೈಝಿ ಕೆಮ್ಮಾರ ನಿಯೋಗದಲ್ಲಿದ್ದರು.