×
Ad

ಸೌಜನ್ಯಾ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ಮರುತನಿಖೆಗೆ ಹೈಕೋರ್ಟ್ ತಡೆ

Update: 2017-04-11 20:46 IST

ಬೆಂಗಳೂರು, ಎ.11: ಉಜಿರೆಯ ಸೌಜನ್ಯ ಅತ್ಯಾಚಾರ ಹಾಗೂ ಕೊಲೆ ಪ್ರಕರಣದ ಮರುತನಿಖೆಗೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಸಂಬಂಧ ಆರೋಪಿ ಸಂತೋಷ್‌ರಾವ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆನಂದ್ ಭೈರಾರೆಡ್ಡಿ ಅವರಿದ್ದ ಪೀಠ ಈ ಆದೇಶ ನೀಡಿತು. 

ಸೌಜನ್ಯ ತಂದೆ ಸಿಬಿಐ ಸಲ್ಲಿಸಿದ್ದ ಚಾರ್ಜ್‌ಶೀಟ್‌ನ್ನು ಪ್ರಶ್ನಿಸಿ ಇತ್ತೀಚೆಗಷ್ಟೇ ಸಿಬಿಐ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಿಬಿಐ ಕೋರ್ಟ್ ಅರ್ಜಿಯನ್ನು ಮಾನ್ಯ ಮಾಡಿ, ಸೌಜನ್ಯ ಪ್ರಕರಣವನ್ನು ಮರು ತನಿಖೆಗೆ ಆದೇಶಿಸಿ, 3 ತಿಂಗಳ ಒಳಗೆ ವರದಿ ನೀಡುವಂತೆ ಆದೇಶಿಸಿತ್ತು. ಆರೋಪಿ ಸಂತೋಷ್‌ರಾವ್, ಸಿಬಿಐ ಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠವು ಸೌಜನ್ಯಾ ಪ್ರಕರಣದ ಮರು ತನಿಖೆಗೆ ತಡೆ ನೀಡಿ ಆದೇಶಿಸಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News