ಡಾ.ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಗೆ ಕೃತಿಗಳ ಆಹ್ವಾನ

Update: 2017-04-12 04:30 GMT

ಕುಂದಾಪುರ, ಎ.11:ಮಣಿಪಾಲ ಅಕಾಡಮಿ ಆಫ್ ಜನರಲ್ ಎಜ್ಯುಕೇಶನ್‌ನ ಆಡಳಿತಾಧಿಕಾರಿ ಡಾ.ಎಚ್.ಶಾಂತಾರಾಮ್ ಹೆಸರಿನಲ್ಲಿ ಕುಂದಾಪುರದ ಭಂಡಾರ್ಕಾರ್ಸ್ ಕಾಲೇಜು 2010ರಿಂದ ಕನ್ನಡದ ಅತ್ಯುತ್ತಮ ಸೃಜನಶೀಲ ಕೃತಿಗೆ ಪ್ರತಿ ವರ್ಷ ನೀಡುತ್ತಿರುವ ಸಾಹಿತ್ಯಿಕ ಪ್ರಶಸ್ತಿಗೆ ಈ ಬಾರಿ ಸಣ್ಣ ಕಥಾ ಸಂಕಲನಗಳನ್ನು ಆಹ್ವಾನಿಸಲಾಗಿದೆ.

2015ರ ಜನವರಿಯಿಂದ 2016ರ ಡಿಸೆಂಬರ್ ತಿಂಗಳ ನಡುವೆ (ಎರಡು ವರ್ಷಗಳ ಅವಧಿಯಲ್ಲಿ) ಮೊದಲ ಆವೃತ್ತಿಯಾಗಿ ಪ್ರಕಟಗೊಂಡ ಕೃತಿಗಳನ್ನು ಮಾತ್ರ ಪ್ರಶಸ್ತಿ ಆಯ್ಕೆಗೆ ಪರಿಗಣಿಸಲಾಗುವುದು.

ಸಣ್ಣಕಥಾ ಸಂಕಲನಗಳ ನಾಲ್ಕು ಪ್ರತಿಗಳನ್ನು ಮೇ 15ರೊಳಗೆ ಡಾ.ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ, ಭಂಡಾರ್ಕಾರ್ಸ್ ಕಾಲೇಜು ಆವರಣ, ಕುಂದಾಪುರ- 576201 ಈ ವಿಳಾಸಕ್ಕೆ ಕಳುಹಿಸಿ ಕೊಡುವಂತೆ ಕೋರಲಾಗಿದೆ. ಪ್ರಶಸ್ತಿ ಪ್ರದಾನ ಸಮಾರಂಭ ಆಗಸ್ಟ್ ತಿಂಗಳಿನಲ್ಲಿ ನಡೆಯಲಿದ್ದು, ವಿಜೇತ ಕೃತಿಯ ಲೇಖಕರಿಗೆ 15,000 ರೂ. ಬಹುಮಾನದೊಂದಿಗೆ ಬೆಳ್ಳಿಫಲಕವನ್ನು ನೀಡಲಾಗುವುದು. ಹೆಚ್ಚಿನ ಮಾಹಿತಿಗಳಿಗಾಗಿ ದೂರವಾಣಿ:08254-230369 ಅಥವಾ 9449257263 ನ್ನು ಸಂಪರ್ಕಿಸಬಹುದು ಎಂದು ಡಾ. ಎಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸಮಿತಿ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News