×
Ad

ಎ.17ರಂದು ಕೆಂಪೇಗೌಡ ದಿನಾಚರಣೆ; ಡಿ.ಕೆ.ಶಿವಕುಮಾರ್

Update: 2017-04-12 21:17 IST

ಬೆಂಗಳೂರು, ಎ.12: ನಾಡಪ್ರಭು ಕೆಂಪೇಗೌಡ ದಿನಾಚರಣೆಯನ್ನು ಎ.17ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಸರಕಾರದ ವತಿಯಿಂದ ಆಚರಿಸಲಾಗುತ್ತಿದೆ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಂಪೇಗೌಡ ದಿನಾಚರಣೆ ಆಚರಿಸಬೇಕೆಂಬುದು ನಾಡಿನ ಜನತೆಯ ಬೇಡಿಕೆಯಾಗಿತ್ತು. ಅದನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಈಡೇರಿಸಿದ್ದಾರೆ ಎಂದು ಅಭಿಮಾನ ವ್ಯಕ್ತಪಡಿಸಿದರು.

 ಸ್ವಾತಂತ್ರ್ಯ ಉದ್ಯಾನವನದಿಂದ ವಿಧಾನಸೌಧದವರೆಗೆ ಸಾಂಸ್ಕೃತಿಕ ಕಲಾತಂಡಗಳ ಜೊತೆಗೆ ಕೆಂಪೇಗೌಡ ಭಾವಚಿತ್ರವನ್ನು ಮೆರವಣಿಗೆ ನಡೆಸಲಾಗುವುದು. ಕಾರ್ಯಕ್ರಮದ ವೇಳೆ ಕೆಂಪೇಗೌಡರ 30ನಿಮಿಷಗಳ ಸಾಕ್ಷ್ಯಚಿತ್ರ ಪ್ರದರ್ಶನ, ಕೈಪಿಡಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಡುಗಡೆಗೊಳಿಸಲಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ, ವಾರ್ತಾ ಇಲಾಖೆಯ ನಿರ್ದೇಶಕ ವಿಶುಕುಮಾರ್ ಉಪಸ್ಥಿತರಿದ್ದರು.

ನಾಡಪ್ರಭು ಕೆಂಪೇಗೌಡ ಸಮಾದಿ, ಅವರು ನಿರ್ಮಿಸಿದ ಗೋಪುರಗಳ ಸಂರಕ್ಷಣೆ ಸೇರಿದಂತೆ ಕೆಂಪೇಗೌಡರ ಕುರಿತು ಹೆಚ್ಚಿನ ಸಂಶೋಧನೆಗಾಗಿ ಕೆಂಪೇಗೌಡ ಪ್ರಾಧಿಕಾರವನ್ನು ಸ್ಥಾಪಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷರಾಗಿದ್ದಾರೆ.

.................................
ವಿದ್ಯುತ್ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಇಆರ್‌ಸಿ ವಿದ್ಯುತ್ ಕಂಪೆನಿ, ಸರಕಾರ ಹಾಗೂ ಗ್ರಾಹಕರ ಹಿತದೃಷ್ಟಿಯಿಂದ ಒಳ್ಳೆಯ ತೀರ್ಮಾನವನ್ನೇ ಕೈಗೊಂಡಿದೆ. ಕಡಿಮೆ ವಿದ್ಯುತ್ ಬಳಸುವವರಿಗೆ ಸಬ್ಸಿಡಿ ನೀಡಲು ತೀರ್ಮಾನಿಸಲಾಗಿದೆ. ಹಾಗೂ ವಿದ್ಯುತ್ ಬೇಡಿಕೆಯನ್ನು ಗಮನದಲ್ಲಿಟ್ಟು ಬೋರ್‌ವೆಲ್ ಗೆ ಮುಂದಿನ ದಿನಗಳಲ್ಲಿ ಮೀಟರ್ ಅಳವಡಿಕೆ ಮಾಡಲು ಚಿಂತನೆ ನಡೆಸಲಾಗುತ್ತಿದೆ.
-ಡಿ.ಕೆ.ಶಿವಕುಮಾರ್ ,ಇಂಧನ ಸಚಿವ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News