ಎ.15ರಂದು ಪ.ಗೋ.ಪ್ರಶಸ್ತಿ ಪ್ರದಾನ ಸಮಾರಂಭ
Update: 2017-04-12 23:07 IST
ಮಂಗಳೂರು, ಎ.12: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡಲಾಗುವ 2016ನೇ ಸಾಲಿನ ಪ.ಗೋ. ಗ್ರಾಮೀಣ ವರದಿಗಾರಿಕೆ ಪ್ರಶಸ್ತಿಗೆ ‘ಕನ್ನಡ ಪ್ರಭ’ ಪತ್ರಿಕೆಯ ಹಿರಿಯ ವರದಿಗಾರ ಸಂದೀಪ್ ವಾಗ್ಲೆ ಆಯ್ಕೆಯಾಗಿದ್ದು, ಎಪ್ರಿಲ್ 15ರಂದು 11 ಗಂಟೆಗೆ ಪ್ರಶಸ್ತಿ ಪ್ರದಾನ ಸಮಾರಂಭವು ಪತ್ರಿಕಾ ಭವನದಲ್ಲಿ ನಡೆಯಲಿದೆ.
ಉದಯ ಟಿವಿ ಮುಖ್ಯ ಸುದ್ದಿ ಸಂಪಾದಕ ಬಿ. ಸಮೀವುಲ್ಲಾ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
2016ರ ಜುಲೈ 26 ರಂದು ಕನ್ನಡ ಪ್ರಭ ಪತ್ರಿಕೆಯಲ್ಲಿ ಪ್ರಕಟವಾದ “ನಾಡಿಗೆ ಬಂದು ಸೊರಗಿದ ಕೊರಗರು’’ ವರದಿಗೆ ಈ ಪ್ರಶಸ್ತಿ ಲಭಿಸಿದೆ. ಪ್ರಶಸ್ತಿಯು 10,001 ರೂ., ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ ಎಂದು ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ನಾಯಕ್ ಇಂದಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.