ಟ್ಯಾಂಕರ್- ದ್ವಿಚಕ್ರ ವಾಹನ ಮುಖಾಮುಖಿ ಢಿಕ್ಕಿ:ಓರ್ವ ಮೃತ್ಯು
Update: 2017-04-13 18:43 IST
ಬಾಗೇಪಲ್ಲಿ, ಎ.13: ನೀರಿನ ಟ್ಯಾಂಕರ್ ಹಾಗೂ ದ್ವಿಚಕ್ರ ವಾಹನದ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವರು ಮೃತಪಟ್ಟಿರುವ ಘಟನೆ ಗುರುವಾರ ಬಾಗೇಪಲ್ಲಿ ಪಟ್ಟಣದ ನ್ಯಾಷನಲ್ ಕಾಲೇಜಿನ ಬಳಿ ನಡೆದಿದೆ.
ಪಟ್ಟಣದ ಬಿಸಿಎಂ ವಿದ್ಯಾರ್ಥಿನಿಲಯ ಹಿಂಭಾಗದ ನಿವಾಸಿ ಸದ್ದಾಂ ಹುಸೈನ್(19) ಮೃತಪಟ್ಟಿರುವ ಯುವಕ ಎಂದು ಗುರುತಿಸಲಾಗಿದೆ.
ಕಾರ್‌ಪೆಂಟರ್ ಕೆಲಸ ಮಾಡುತ್ತಿದ್ದ ಸದ್ದಾಂ ಹುಸೈನ್ ಊಟ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಕೆಲಸಕ್ಕೆ ತೆರಳುವ ಸಂದರ್ಭದಲ್ಲಿ ನೀರಿನ ಟ್ಯಾಂಕರ್ ಗೆ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಸದ್ದಾಂ ಹುಸೈನ್ ಅವರ ತಲೆಭಾಗದಲ್ಲಿ ತೀವ್ರ ರಕ್ತಸ್ತ್ರಾವ ಉಂಟಾಗಿದೆ. ಕೂಡಲೇ ಬಾಗೇಪಲ್ಲಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡುತ್ತಿದ್ದರು ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದಾರೆಂದು ಕುಟುಂಬಸ್ಥರು ತಿಳಿಸಿದ್ದಾರೆ.
ಈ ಸಂಬಂಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.