​ನಾಳೆ ಎ.ಪಿ. ಉಸ್ತಾದ್ ಮಾರಿಪಳ್ಳಕ್ಕೆ

Update: 2017-04-13 13:50 GMT

ಬಂಟ್ವಾಳ, ಎ. 13: ಮಸ್ಜಿದುಲ್ ಖಿಳ್‌ರ್ ಮತ್ತು ದಾರುಲ್ ಉಲೂಂ ಮದ್ರಸ ಹಾಗೂ ಎಸ್‌ವೈಎಸ್, ಎಸ್ಸೆಸ್ಸೆಫ್ ಮಾರಿಪಳ್ಳ ಪೇರಿಮಾರ್ ವತಿಯಿಂದ ಎ.15ರಂದು ಮಗ್ರಿಬ್ ನಮಾಝ್ ಬಳಿಕ ಪೇರಿಮಾರಿನಲ್ಲಿ ನಡೆಯುವ ಗ್ರ್ಯಾಂಡ್ ಸುನ್ನೀ ಇಜ್‌ತಿಮಾ ಕಾರ್ಯಕ್ರಮದಲ್ಲಿ ಅಖಿಲ ಭಾರತ ಸುನ್ನಿ ಜಂ-ಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಎ.ಪಿ.ಅಬೂಬಕ್ಕರ್ ಮುಸ್ಲಿಯಾರ್ ಭಾಗವಹಿಸಿ ಮುಖ್ಯ ಪ್ರಭಾಷಣಗೈಯಲಿದ್ದಾರೆ ಎಂದು ಕಾರ್ಯಕ್ರಮ ನಿರ್ವಾಹಕ ಸಮಿತಿ ಚೆಯರ್‌ಮ್ಯಾನ್ ಮುಹಮ್ಮದ್ ರಫೀಕ್ ಸಅದಿ ಅಲ್‌ ಅಫ್ಲಲಿ ತಿಳಿಸಿದರು.

ಬಿ.ಸಿ.ರೋಡ್ ಪ್ರೆಸ್‌ಕ್ಲಬ್‌ನಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅಸ್ಸೈಯದ್ ಫಝಲ್ ಕೋಯಮ್ಮ ತಂಙಳ್ ಕೂರತ್ ದುಆಶೀರ್ವಚನ ನೀಡಲಿದ್ದಾರೆ. ಅಸ್ಸೈಯದ್ ಶಿಹಾಬುದ್ದೀನ್ ಸಖಾಫಿ ಅಲ್ ಹೈದ್ರೋಸಿ ಕಿಲ್ಲೂರು ತಂಙಳ್ ಸಮಾರೋಪ ಪ್ರಾರ್ಥನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ವಹಿಸಲಿದ್ದು, ಸಚಿವ ಯು.ಟಿ.ಖಾದರ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಸಿದ್ದೀಕ್ ಸಖಾಫಿ ಅರಿಯೂರು, ಎಮ್ಮೆಸ್ಸೆಂ ಅಬ್ದುರ್ರಶೀದ್ ಝೈನಿ ಕಾಮಿಲ್, ಎನ್.ಕೆ.ಎಂ.ಶಾಫಿ ಸಅದಿ, ಕೆ.ಎಂ.ಸಿದ್ದೀಕ್ ಮೋಂಟುಗೋಳಿ ಭಾಷಣ ಮಾಡಲಿದ್ದು ಎಂ.ಪಿ.ಎಂ. ಅಶ್ರಫ್ ಸಅದಿ ಮಲ್ಲೂರು ಸಂದೇಶ ಭಾಷಣ ಮಾಡಲಿದ್ದಾರೆ. ಸಚಿವ ರಮಾನಾಥ ರೈ, ಯೆನೆಪೊಯ ಅಬ್ದುಲ್ಲಾ ಕುಂಞಿ, ಸೈಯದ್ ಮುಷ್ತಾಕುರ್ರಹ್ಮಾನ್ ತಂಙಳ್ ಚಟ್ಟಕ್ಕಲ್ ಸಹಿತ ಹಲವು ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರು ಭಾಗವಹಿಸಲಿದ್ದಾರೆ ಎಂದು ಅವರು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ನಿರ್ವಾಹಕ ಸಮಿತಿಯ ಅಧ್ಯಕ್ಷ ಹಾಜಿ ಅಬ್ದುಲ್ ರಝಾಕ್ ಬಿ., ಕೋ ಆರ್ಡಿನೇಟರ್ ಇಬ್ರಾಹೀಂ ಖಲೀಲ್ ಮುಸ್ಲಿಯಾರ್, ಜನರಲ್ ಕನ್ವೀನರ್ ಅಬ್ದುಲ್ ಪಲೂಲ್, ಮಸೀದಿ ಮತ್ತು ಮದರಸದ ಅಧ್ಯಕ್ಷ ಪಿ.ಎಂ.ಶಾಫಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News