ಉ.ಪ್ರದೇಶ : ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಜಾತಿ ಆಧಾರಿತ ಮೀಸಲಾತಿ ರದ್ದು

Update: 2017-04-13 15:38 GMT

ಲಕ್ನೊ, ಎ.13: ರಾಜ್ಯದ ಖಾಸಗಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕಾಲೇಜುಗಳಲ್ಲಿ ಜಾತಿ ಆಧಾರಿತ ಮೀಸಲಾತಿ ವ್ಯವಸ್ಥೆಯನ್ನು ರಾಜ್ಯ ಸರಕಾರ ರದ್ದುಗೊಳಿಸಿದೆ. ಇದರಿಂದ ಇದುವರೆಗೆ ಮೀಸಲಾತಿ ಕೋಟಾದ ಸೌಲಭ್ಯ ಪಡೆಯುತ್ತಿದ್ದ ಎಸ್‌ಸಿ, ಎಸ್‌ಟಿ ಮತ್ತು ಇತರ ಹಿಂದುಳಿದ ವರ್ಗ(ಒಬಿಸಿ)ದ ಅಭ್ಯರ್ಥಿಗಳಿಗೆ ನಿರಾಶೆಯಾಗಿದೆ.

  ಜಾತಿ ಆಧಾರಿತ ಮೀಸಲಾತಿ ವ್ಯವಸ್ಥೆಯನ್ನು ರದ್ದುಗೊಳಿಸುವ ನಿರ್ಧಾರವನ್ನು ಈ ಹಿಂದಿನ ಅಖಿಲೇಶ್ ಯಾದವ್ ನೇತೃತ್ವದ ಸರಕಾರ ಕೈಗೊಂಡಿತ್ತು. ಅದನ್ನು ಈಗ ಅನುಷ್ಠಾನಗೊಳಿಸುತ್ತಿರುವುದಾಗಿ ಆದಿತ್ಯನಾಥ್ ನೇತೃತ್ವದ ಬಿಜೆಪಿ ಸರಕಾರ ತಿಳಿಸಿದೆ. ಈ ಬಗ್ಗೆ ಆದೇಶವನ್ನು ಸರಕಾರ ಹೊರಡಿಸಿದೆ.

  ಅಲ್ಲದೆ ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸಲು ಸರಕಾರ ಕೆಲವೊಂದು ಕ್ರಮಗಳನ್ನು ಕೈಗೊಂಡಿದೆ. ಸರಕಾರಿ ಶಾಲೆಗಳಲ್ಲಿ ನರ್ಸರಿ ತರಗತಿಯಿಂದ ಇಂಗ್ಲಿಷ್ ಕಲಿಕೆ ಆರಂಭಿಸಲು ನಿರ್ಧರಿಸಲಾಗಿದೆ. ಇದುವರೆಗೆ ಆರನೇ ತರಗತಿಯಿಂದ ಇಂಗ್ಲಿಷ್ ಕಲಿಸಲಾಗುತ್ತಿತ್ತು. ಶಾಲೆಗಳಲ್ಲಿ ಯೋಗ, ಸ್ವಯಂ ರಕ್ಷಣೆಯ ಕಲೆ ಮತ್ತು ವಿದ್ಯಾರ್ಥಿಗಳು ಕನಿಷ್ಟ ಒಂದು ವಿದೇಶಿ ಭಾಷೆ ಕಲಿಯುವ ಯೋಜನೆಯನ್ನೂ ಅನುಷ್ಠಾನಗೊಳಿಸಲು ಸರಕಾರ ನಿರ್ಧರಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News