ಪ್ರತಿಯೊಬ್ಬರು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು;ಮಕ್ಬೂಲ್ ಅಹ್ಮದ್
ಬೆಂಗಳೂರು, ಎ.13: ಪ್ರತಿಯೊಬ್ಬರು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕೆಂದು ಸೆಂಟ್ರಲ್ ಮುಸ್ಲಿಮ್ ಅಸೋಸಿಯೇಶನ್ ಅಧ್ಯಕ್ಷ ಮಕ್ಬೂಲ್ ಅಹ್ಮದ್ ಎಂದು ಹೇಳಿದ್ದಾರೆ.
ಗುರುವಾರ ನಗರದ ಕಬ್ಬನ್‌ಪೇಟೆಯ ಅಬ್ಬಾಸ್ ಖಾನ್ ಮಹಿಳಾ ಕಾಲೇಜು ವತಿಯಿಂದ ನಡೆದ ಕಾಲೇಜು ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,ಶಿಕ್ಷಣದಿಂದ ಮಾತ್ರ ದೇಶದ ಅಭಿವೃದ್ದಿ ಸಾಧ್ಯ.ಪ್ರತಿಯೊಬ್ಬರು ಗುಣಮಟ್ಟದ ಶಿಕ್ಷಣ ಪಡೆಯುವಂತಾಗಬೇಕು. ಶಿಕ್ಷಣಕ್ಕಾಗಿ ಸರಕಾರ ಕೋಟ್ಯಂತರ ರೂ.ವೆಚ್ಚ ಮಾಡುತ್ತಿದ್ದರೂ ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಸತತ ಅಭ್ಯಾಸ ಮಾಡುವ ಮೂಲಕ ಉನ್ನತ ಸಾಧನೆ ಮಾಡಬೇಕು.ಪರೀಕ್ಷೆಗೆ ವೇಳಾಪಟ್ಟಿ ಮಾಡಿಕೊಂಡು ಅಧ್ಯಯನ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಮಕ್ಬೂಲ್ ಅಹ್ಮದ್ ಸಲಹೆ .
ಕಾರ್ಯಕ್ರಮದಲ್ಲಿ ಸಿಎಂಎ ಉಪಾಧ್ಯಕ್ಷ ಎಂ.ಸಿರಾಜುಲ್ಲಾ ಖಾನ್, ಪ್ರಧಾನ ಕಾರ್ಯದರ್ಶಿ ಡಾ.ಝಹೀರುದ್ದೀನ್, ರಿಯಾಝ್ ಅಹ್ಮದ್ ಶರೀಫ್, ಕಾಲೇಜಿನ ಪ್ರಾಂಶುಪಾಲ ಡಾ.ಸುಬ್ರಮಣ್ಯ, ಝುಬೈದಾ ಬೇಗಂ ಮತ್ತಿತರರು ಹಾಜರಿದ್ದರು.