×
Ad

ಬಿಪಿಎಲ್/ಎಪಿಎಲ್ ಕುಟುಂಬಗಳಿಗೆ ಉಚಿತ ಚಿಕಿತ್ಸೆ: ಆಸ್ಪತ್ರೆಗಳ ಪಟ್ಟಿ

Update: 2017-04-14 00:01 IST

ಮಂಗಳೂರು, ಎ.13: ರಾಜ್ಯ ಸರಕಾರವು ಬಿಪಿಎಲ್ ಕಾರ್ಡ್‌ದಾರರಿಗೆ ವಾಜಪೇಯಿ ಆರೋಗ್ಯಶ್ರೀ, ಎಪಿಎಲ್ ಕಾರ್ಡ್‌ದಾರರಿಗೆ ರಾಜೀವ್ ಆರೋಗ್ಯ ಭಾಗ್ಯ, ಸರಕಾರಿ ನೌಕರರಿಗೆ ಹಾಗೂ ಅವರ ಕುಟುಂಬದವರಿಗೆ ಜ್ಯೋತಿ ಸಂಜೀವಿನಿ ಯೋಜನೆಗಳನ್ನು ಜಾರಿಗೊಳಿಸಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಂಗ ಸಂಸ್ಥೆಯಾದ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಈ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ.

ಇದರ ಅನ್ವಯ ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ, ಅಪಘಾತ(ಮೋಟಾರು ವಾಹನ ಕಾಯ್ದೆಯಡಿಯಲ್ಲಿ ಒಳಗೊಳ್ಳದ ಪ್ರಕರಣಗಳು), ನವಜಾತ ಶಿಶುಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆಗಳಿಗೆ ಉಚಿತವಾಗಿ ಒಡಂಬಡಿಕೆ ಹೊಂದಿದ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲಾಗುತ್ತಿದೆ. ದ.ಕ. ಜಿಲ್ಲೆಯಲ್ಲಿ ಪ್ರಸ್ತುತ ಈ ಮೂರು ಯೋಜನೆಗಳೊಂದಿಗೆ ಒಡಂಬಡಿಕೆ ಹೊಂದಿರುವ ಆಸ್ಪತ್ರೆಗಳ ಪರಿಷ್ಕೃತ ಪಟ್ಟಿ ಈ ಕೆಳಗಿನಂತಿದೆ.

  *ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆ ಮತ್ತು ದೇರಳಕಟ್ಟೆಯ ಕೆ.ಎಸ್. ಹೆಗ್ಡೆ ಆಸ್ಪತ್ರೆ: ಹೃದ್ರೋಗ, ಕ್ಯಾನ್ಸರ್, ನರರೋಗ, ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ, ಅಪಘಾತ, ನವಜಾತ ಶಿಶುಗಳಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ. *ಮಣ್ಣಗುಡ್ಡೆಯ ಗ್ಲೋಬಲ್ ಆಸ್ಪತ್ರೆ: ಕ್ಯಾನ್ಸರ್, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಅಪಘಾತ, ಸುಟ್ಟಗಾಯಕ್ಕೆ ಚಿಕಿತ್ಸೆ. * ಅತ್ತಾವರದ ಕೆ.ಎಂ.ಸಿ ಆಸ್ಪತ್ರೆ: ಕ್ಯಾನ್ಸರ್, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಅಪಘಾತ. *ಮಂಗಳೂರಿನ ಜಿಲ್ಲಾ ವೆನ್ಲಾಕ್ ಆಸ್ಪತ್ರೆ: ಮೂತ್ರಪಿಂಡದ ಕಾಯಿಲೆ, ನರರೋಗ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಕ್ಯಾನ್ಸರ್, ಅಪಘಾತ, ಸುಟ್ಟಗಾಯಕ್ಕೆ ಚಿಕಿತ್ಸೆ. * ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆ: ನರರೋಗ, ಮೂತ್ರಪಿಂಡದ ಕಾಯಿಲೆ, ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ, ಕ್ಯಾನ್ಸರ್, ಅಪಘಾತ. *ಕೊಡಿಯಾಲ್‌ಬೈಲ್ ಯೆನೆಪೊಯ ಆಸ್ಪತ್ರೆ: ಹೃದ್ರೋಗ ಮತ್ತು ಮೂತ್ರಪಿಂಡದ ಕಾಯಿಲೆ, *ಪಂಪ್‌ವೆಲ್‌ನ ಒಮೇಗಾ ಆಸ್ಪತ್ರೆ: ಹೃದಯ ರೋಗ, ನರ ರೋಗ, ಮೂತ್ರಪಿಂಡದ ಕಾಯಿಲೆ, *ದೇರಳಕಟ್ಟೆಯ ಕಣಚೂರು ಆಸ್ಪತ್ರೆ: ಮೂತ್ರಪಿಂಡದ ಕಾಯಿಲೆ, ಅಪಘಾತ ಮತ್ತು ನವಜಾತ ಶಿಶುಗಳ ಶಸ್ತ್ರಚಿಕಿತ್ಸೆ. * ಪುತ್ತೂರಿನ ಪ್ರಗತಿ ಆಸ್ಪತ್ರೆ: ಮೂತ್ರಪಿಂಡದ ಕಾಯಿಲೆ, ಸುಟ್ಟಗಾಯ ಮತ್ತು ಅಪಘಾತ. * ಎಂ.ಐ.ಒ ಆಸ್ಪತ್ರೆ, ಪಂಪ್‌ವೆಲ್: ಕ್ಯಾನ್ಸರ್ ಚಿಕಿತ್ಸೆ. * ಕೆಎಂಸಿ ಜ್ಯೋತಿ ಸರ್ಕಲ್: ಹೃದಯ ರೋಗಕ್ಕೆ ಚಿಕಿತ್ಸೆ.

 ಹೆಚ್ಚಿನ ಮಾಹಿತಿಗಾಗಿ ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ, ಜಿಲ್ಲಾ ಆಸ್ಪತ್ರೆ ಮತ್ತು ಒಡಂಬಡಿಕೆ ಹೊಂದಿರುವ ಆಸ್ಪತ್ರೆಗಳ ಆರೋಗ್ಯ ಮಿತ್ರರನ್ನು ಸಂಪರ್ಕಿಸುವಂತೆ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News