ಸಚಿವ ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ಕ್ರಮ: ಸಿದ್ದರಾಮಯ್ಯ
Update: 2017-04-14 10:28 IST
ಬೆಂಗಳೂರು, ಎ.14: ರಾಜ್ಯ ಸಚಿವ ಸಂಪುಟದಲ್ಲಿ ಸದ್ಯ ಎರಡು ಸ್ಥಾನಗಳು ಖಾಲಿಯಿವೆ. ಅವುಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಈ ಬಗ್ಗೆ ದಿಲ್ಲಿಗೆ ಹೋದಾಗ ಹೈಕಮಾಂಡ್ ನಾಯಕರ ಬಳಿ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಡಾ.ಬಿ.ಆರ್.ಅಂಬೇಡ್ಕರ್ ಅವರ 126ನೆ ಜನ್ಮ ದಿನದ ಅಂಗವಾಗಿ ಇಂದು ವಿಧಾನಸೌಧದ ಮುಂಭಾಗದಲ್ಲಿ ಸರ್ಕಾರದ ವತಿಯಿಂದ ಏರ್ಪಡಿಸಲಾಗಿದ್ದ ಕಾರ್ಯಕ್ರಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಈ ಸಂದರ್ಭ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಸಂಸದ ಕೆ.ಎಚ್.ಮುನಿಯಪ್ಪ ಹಾಗು ಸರ್ಕಾರದ ಉನ್ನತ ಮಟ್ಟದ ಅಧಿಕಾರಿಗಳು ಅಂಬೇಡ್ಕರ್ ಪ್ರತಿಮೆಗೆ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದರು.