×
Ad

ಅಸ್ಪೃಶ್ಯತೆ-ಅಸಮಾನತೆ ವಿರುದ್ಧ ಜಾಗೃತಿ: ಕೇಂದ್ರ ಸಚಿವ ಸದಾನಂದಗೌಡ

Update: 2017-04-14 20:06 IST

ಬೆಂಗಳೂರು, ಎ. 14: ದೇಶದಲ್ಲಿರುವ ಅಸ್ಪೃಶ್ಯತೆ ಮತ್ತು ಅಸಮಾನತೆ ವಿರುದ್ಧ ಕೇಂದ್ರ ಸರಕಾರ ಜಾಗೃತಿ ಮೂಡಿಸುತ್ತಿದೆ ಎಂದು ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ತಿಳಿಸಿದ್ದಾರೆ.

ಶುಕ್ರವಾರ ನಡೆದ ಯಶವಂತಪುರ ವೃತ್ತಕ್ಕೆ ಸಂವಿಧಾನ ವೃತ್ತ ಎಂದು ನಾಮಕರಣ ಮಾಡಿ ಬಳಿಕ ಮಾತನಾಡಿದ ಅವರು, ಅಸ್ಪೃಶ್ಯತೆ ಸೇರಿದಂತೆ ಸಾಮಾಜಿಕ ಪಿಡುಗುಗಳ ವಿರುದ್ಧ ಮೋದಿ ನೇತೃತ್ವದ ಸರಕಾರ ಜನತೆಯಲ್ಲಿ ಅರಿವು ಮೂಡಿಸಲು ಹಲವು ಕಾರ್ಯಕ್ರಮ ಕೈಗೊಂಡಿದೆ ಎಂದರು.

ಪ್ರತಿಕ್ರಿಯೆಗೆ ಬಿಎಸ್‌ವೈ ನಕಾರ: ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ನಂಜನಗೂಡು-ಗುಂಡ್ಲುಪೇಟೆ ಉಪ ಚುನಾವಣೆ ಪಕ್ಷದ ಸೋಲಿನ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆಯೂ ಈಗಲೇ ಏನನ್ನೂ ಹೇಳಲು ಆಗುವುದಿಲ್ಲ ಎಂದು ನುಣುಚಿಕೊಂಡರು.

ಮಾಜಿ ಸಚಿವ ಗೋವಿಂದ ಕಾರಜೋಳ, ಶಾಸಕ ಡಾ.ಅಶ್ವತ್ಥ ನಾರಾಯಣ, ಪಾಲಿಕೆ ಸದಸ್ಯ ಜಯಪಾಲ್, ಯಶವಂತಪುರ ಕ್ಷೇತ್ರ ಕಸಾಪ ಅಧ್ಯಕ್ಷ ರಮೇಶ್‌ಬಾಬು ಸೇರಿದಂತೆ ಇನ್ನಿತರ ಮುಖಂಡರು ಈ ವೇಳೆ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News