×
Ad

ಯಾವುದೇ ಕ್ಷಣದಲ್ಲಿ ಕೊರಿಯ ಸಂಘರ್ಷ : ಚೀನಾ

Update: 2017-04-14 21:11 IST

ಬೀಜಿಂಗ್, ಎ. 14: ಉತ್ತರ ಕೊರಿಯಕ್ಕೆ ಸಂಬಂಧಿಸಿದ ಸಂಘರ್ಷ ಯಾವುದೇ ಕ್ಷಣದಲ್ಲಿ ಸ್ಫೋಟಿಸಬಹುದು ಎಂದು ಚೀನಾ ಶುಕ್ರವಾರ ಹೇಳಿದೆ. ಆದರೆ, ಈ ಯುದ್ಧದಲ್ಲಿ ಯಾರೂ ಗೆಲ್ಲುವುದಿಲ್ಲ ಎಂದಿದೆ.

ಉತ್ತರ ಕೊರಿಯವು ಇನ್ನೊಂದು ಪರಮಾಣು ಅಥವಾ ಕ್ಷಿಪಣಿ ಪರೀಕ್ಷೆಯನ್ನು ನಡೆಸಲು ಸಿದ್ಧಗೊಳ್ಳುತ್ತಿದೆ ಎಂಬ ಊಹಾಪೋಹಗಳು ಕೇಳಿಬರುತ್ತಿರುವಂತೆಯೇ, ಉತ್ತರ ಕೊರಿಯ ಸಮಸ್ಯೆಯನ್ನು ಏಕಾಂಗಿಯಾಗಿ ನಿಭಾಯಿಸುವುದಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿರುವುದನ್ನು ಸ್ಮರಿಸಬಹುದಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News