×
Ad

ರಕ್ಷಣೆಯ ಹೆಸರಿನಲ್ಲಿ ಮನುಷ್ಯರ ಹತ್ಯೆ: ಸಚಿವ ಪ್ರಮೋದ್ ಖೇದ

Update: 2017-04-14 22:17 IST

ಉಡುಪಿ, ಎ.14: ಯಾವುದನ್ನೋ ರಕ್ಷಣೆ ಮಾಡುವ ಹೆಸರಿನಲ್ಲಿ ಮನುಷ್ಯ ರನ್ನು ಕೊಲ್ಲುವಂತಹ ಸ್ಥಿತಿ ಭಾರತದಲ್ಲಿ ನಿರ್ಮಾಣವಾಗಿರುವುದು ಖೇದಕರ. ದಲಿತರು ಅಹಿಂಸಾತ್ಮಕ ಹೋರಾಟದ ಮೂಲಕ ತಮ್ಮ ಸಮಸ್ಯೆಗಳನ್ನು ಪರಿಹರಿಸಿ ಕೊಳ್ಳಬೇಕು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸೇವೆ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತು ವಾರಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಭೀಮಘರ್ಜನೆ) ಉಡುಪಿ ಜಿಲ್ಲಾ ಸಮಿತಿಯ ವತಿಯಿಂದ ಉಡುಪಿ ಬೋರ್ಡ್ ಹೈಸ್ಕೂಲ್‌ನಲ್ಲಿ ಶುಕ್ರವಾರ ಹಮ್ಮಿಕೊಳ್ಳಲಾದ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ರವರ 126ನೆ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯದಲ್ಲಿ ಶೇ.24ರಷ್ಟು ದಲಿತರಿದ್ದು, ಸಮುದಾಯದ ಅಭಿವೃದ್ಧಿಗೆ ವಿವಿಧ ಇಲಾಖೆಯಲ್ಲಿ 27 ಸಾವಿರ ಕೋಟಿ ರೂ. ಅನುದಾನವನ್ನು ಮೀಸಲಿರಿಸ ಲಾಗಿದೆ. ಸರಕಾರ ಎಷ್ಟೆ ಹಣ ಖರ್ಚು ಮಾಡಿದರೂ ದಲಿತರು ಬಡವರಾ ಗಿಯೇ ಉಳಿಯುತ್ತಿದ್ದಾರೆ. ಆದ್ದರಿಂದ ಮಾಧ್ಯಮಗಳು, ಸಾಮಾಜಿಕ ಹೋರಾಟಗಾರು, ದಲಿತ ಸಂಘಟನೆಗಳು ದಲಿತರ ಏಳಿಗೆಗೆ ಧ್ವನಿ ಎತ್ತಬೇಕಾಗಿದೆ ಎಂದರು.

ಈ ಸಂದರ್ಭದಲ್ಲಿ ಪತ್ರಕರ್ತರಾದ ನಝೀರ್ ಪೊಲ್ಯ, ಶಶಿಧರ್ ಮಾಸ್ತಿ ಬೈಲು, ಉಡುಪಿ ಜಿಲ್ಲಾ ಅಂಬೇಡ್ಕರ್ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ದೇವರಾಜ್, ದಲಿತ ಮುಖಂಡ ಶೇಖರ್ ಪೆರ್ಡೂರು ಅವರಿಗೆ ‘ಭೀಮರತ್ನ ಅಂಬೇಡ್ಕರ್’ ಪ್ರಶಸ್ತಿ ಪ್ರದಾನ ಮಾಡಲಾಯಿತು. ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಅವರನ್ನು ಸನ್ಮಾನಿಸಲಾಯಿತು.

ದಸಂಸ ರಾಜ್ಯ ಸಂಚಾಲಕ ಉದಯ ಕುಮಾರ್ ತಲ್ಲೂರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ದಸಂಸ ಗುಲ್ಬರ್ಗ ವಿಭಾಗದ ರಾಜ್ಯ ಸಂಘಟನಾ ಸಂಚಾಲಕ ನಾಗಣ್ಣ ಕಲ್ಲದೇವನಹಳ್ಳಿ, ರಮೇಶ್ ಹರಿಖಂಡಿಕೆ, ಉಮಾಶಂಕರ್, ಸುಮಿತ್ರಾ, ಚಂದ್ರಮ ತಲ್ಲೂರು ಮೊದಲಾದವರು ಉಪಸ್ಥಿತರಿದ್ದರು. ಚಂದ್ರ ಅಲ್ತಾರ್ ಸ್ವಾಗತಿಸಿದರು. ನಾಗರಾಜ್ ಕೆಂಚನೂರು ವಂದಿಸಿದರು. ವಸಂತ ವಂಡ್ಸೆ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News