​ಶಿಕ್ಷಣವೊಂದೇ ಶೋಷಣೆಯಿಂದ ಹೊರ ಬರುವ ದಾರಿ: ಟಿ.ಬಿ. ಜಯಚಂದ್ರ

Update: 2017-04-14 17:43 GMT

ತುಮಕೂರು, ಎ.14: ಅಂಬೇಡ್ಕರ್ ಶಿಕ್ಷಣ, ಸಂಘಟನೆ ಮತ್ತು ಹೋರಾಟಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಶೋಷಿತ ವರ್ಗ ಮೇಲೆ ಬರಬೇಕಾದರೆ ಶಿಕ್ಷಣ ಪಡೆಯಬೇಕು. ಶಿಕ್ಷಣವೊಂದೇ ಶೋಷಿತರನ್ನು ಮೇಲೆ ತರಲು ಇರುವ ರಹದಾರಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ಹೇಳಿದರು.

ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಜಿಲ್ಲಾಡಳಿತ, ಜಿಪಂ, ನಗರಪಾಲಿಕೆ ಸಂಯುಕ್ತವಾಗಿ ಆಯೋಜಿಸಿದ್ದ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನ್ ರಾಂ ಅವರ ಜನ್ಮ ಜಯಂತಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದ ಅವರು,ಅಂಬೇಡ್ಕರ್ ಕೇವಲ ದಲಿತರಿಗೆ ಮಾತ್ರ ಸೀಮೀತವಲ್ಲ. ಎಲ್ಲರೂ ಸಂವಿಧಾನದ ಅಡಿಯಲ್ಲಿಯೇ ಅವಕಾಶಗಳನ್ನು ಪಡೆಯಲು ಅನುಕೂಲ ಕಲ್ಪಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಶ್ವಸಂಸ್ಥೆ ಅಂಬೇಡ್ಕರ್ ಜಯಂತಿಯನ್ನು ವಿಶ್ವದ ಜ್ಞಾನದಿನವನ್ನು ಘೋಷಿಸಿ ಆಚರಿಸುತ್ತಿದೆ. ಕೊಲಂಬಿಯಾ, ಅಮೆರಿಕ, ಸೇರಿದಂತೆ ವಿಶ್ವದ ಬಹುತೇಕ ಕಡೆ ಅಂಬೇಡ್ಕರ್ ಪ್ರತಿಮೆಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕ ಡಾ.ರವಿಕುಮಾರ್ ನೀಹಾ ಅಂಬೇಡ್ಕರ್ ಮತ್ತು ಬಾಬು ಜಗಜೀವನ ರಾಂ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭದಲ್ಲಿ ಸಂಸದ ಮುದ್ದಹನುಮೇಗೌಡ, ಜಿಪಂ ಉಪಾಧ್ಯಕ್ಷೆ ಶಾರದಾ, ಜಿಲ್ಲಾಧಿಕಾರಿ ಕೆ.ಪಿ.ಮೋಹನ್ ರಾಜ್, ಶಾಸಕ ರಫೀಕ್ ಅಹಮದ್, ತಾಪಂ ಇಒ ಡಾ.ನಾಗಣ್ಣ, ಪಾಲಿಕೆ ಸದಸ್ಯರು ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News