×
Ad

ಎಸ್‌ಸಿ/ಎಸ್‌ಟಿ ಉಪಯೋಜನೆ ಗುರಿ ಸಾಧನೆಗೆ ವಿಫಲ : ಕಾರಣ ನೀಡಲು ಜಿಲ್ಲಾಧಿಕಾರಿ ಸೂಚನೆ

Update: 2017-04-15 20:57 IST

ಉಡುಪಿ, ಎ.15: ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯಡಿಯಲ್ಲಿ ಕೈಗೊಂಡಿರುವ ಕಾರ್ಯಕ್ರಮಗಳಲ್ಲಿ ನಿಗದಿತ ಗುರಿ ಸಾಧಿಸದ ಇಲಾಖೆಗಳು ಲಿಖಿತ ರೂಪದಲ್ಲಿ ಸಮರ್ಪಕ ಕಾರಣ ಗಳನ್ನು ನೀಡುವಂತೆ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

 ಶನಿವಾರ ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ 2016-17ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆ ಹಾಗೂ ಗಿರಿಜನ ಉಪಯೋಜನೆಯ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

 ಜಿಲ್ಲೆಯ ಪ.ಜಾತಿ ಮತ್ತು ಪ.ಪಂಗಡದ ಜನರ ಶ್ರೇಯೋಭಿವೃದ್ದಿಗಾಗಿ ಎಲ್ಲಾ ಇಲಾಖೆಗಳಿಗೆ ಉಪಯೋಜನೆಯಲ್ಲಿ ಆರ್ಥಿಕ ಮತ್ತು ಭೌತಿಕ ಗುರಿ ನಿಗದಿ ಪಡಿಸಲಾಗಿತ್ತು. ಫಲಾನುಭವಿಗಳನ್ನು ಆಯ್ಕೆ ಮಾಡಿ, ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಅನುದಾನವನ್ನು ಸಂಪೂರ್ಣ ವೆಚ್ಚ ಮಾಡಿ, ಫಲಾನುಭವಿಗಳಿಗೆ ಸೌಲ್ಯಗಳನ್ನು ಒದಗಿಸಬೇಕಾಗಿತ್ತು. ಇದರಲ್ಲಿ ನಿಗದಿತ ಗುರಿ ಸಾಧಿಸುವಲ್ಲಿ ವಿಫಲವಾಗಿರುವ ಇಲಾಖೆಗಳು, ವಿಫಲವಾಗಿದ್ದಕ್ಕೆ ಸಮರ್ಪಕ ಕಾರಣಗಳನ್ನು ನೀಡುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಈ ಕುರಿತ ವರದಿಯನ್ನು ಮುಂದಿನ ಕ್ರಮಕ್ಕಾಗಿ ಸರಕಾರಕ್ಕೆ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಪ್ರತಿ ತಿಂಗಳ 15ರಂದು ಪರಿಶಿಷ್ಟ ಜಾತಿ ಉಪಯೋಜನೆ/ಗಿರಿಜನ ಉಪಯೋಜನೆಯ ಸಭೆ ನಡೆಯುತ್ತಿದ್ದು, ಸಭೆಗೆ ಎಲ್ಲಾ ಅಧಿಕಾರಿಗಳು ತಮ್ಮ ಇಲಾಖೆಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳು ಮತ್ತು ಲ್ಯವಿರುವ ಅನುದಾನದ ಅಗತ್ಯ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಿರುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

 ಸಭೆಯಲ್ಲಿ ಜಿಪಂ ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ರಮೇಶ್ ಹಾಗೂ ಎಲ್ಲಾ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News