ವಿದ್ಯುತ್ ದರ ಏರಿಕೆ ವಿರುದ್ಧ ಬಿಜೆಪಿ ಪ್ರತಿಭಟನೆ
Update: 2017-04-16 00:08 IST
ಸುಳ್ಯ, ಎ.15: ರಾಜ್ಯದಲ್ಲಿ ವಿದ್ಯುತ್ ದರ ಏರಿಸಿರುವುದನ್ನು ವಿರೋಧಿಸಿ ಬಿಜೆಪಿ ಸುಳ್ಯ ಮಂಡಲ ಸಮಿತಿಯ ವತಿಯಿಂದ ಬಸ್ ನಿಲ್ದಾಣದ ಬಳಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಜಿಪಂ ಸದಸ್ಯ ಎಸ್.ಎನ್.ಮನ್ಮಥ, ಬಿಜೆಪಿ ಮುಖಂಡ ಎ.ವಿ.ತೀರ್ಥರಾಮ, ಬಿಜೆಪಿ ನಗರಾಧ್ಯಕ್ಷ ವಿನಯಕುಮಾರ್ ಕಂದಡ್ಕ ಮಾತನಾಡಿದರು. ಬಿಜೆಪಿ ಮಂಡಲ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಹೆಗ್ಡೆ, ಬಿಜೆಪಿ ವಕ್ತಾರ ವೆಂಕಟ್ ದಂಬೆಕೋಡಿ, ಜಿಪಂ ಸದಸ್ಯರಾದ ಹರೀಶ್ ಕಂಜಿಪಿಲಿ, ಪುಷ್ಪಾವತಿ ಬಾಳಿಲ, ನಪಂ ಅಧ್ಯಕ್ಷೆ ಶೀಲಾವತಿ ಮಾಧವ, ಉಪಾಧ್ಯಕ್ಷೆ ಹರಿಣಾಕ್ಷಿ ನಾರಾಯಣ, ಸ್ಥಾಯಿ ಸಮಿತಿಯ ಅಧ್ಯಕ್ಷ ಕಿರಣ್ ಕುರುಂಜಿ, ತಾಪಂ ಸ್ಥಾಯಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು, ತಾಪಂ ಸದಸ್ಯೆ ಜಾಹ್ನವಿ ಕಾಂಚೋಡು, ಪ್ರಮುಖರಾದ ಜಯಪ್ರಕಾಶ್ ಕುಂಚಡ್ಕ, ಸುಬೋದ್ ಶೆಟ್ಟಿ ಮೇನಾಲ, ಸಂತೋಷ್ ಜಾಕೆ ಉಪಸ್ಥಿತರಿದ್ದರು.